AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್: ಭಯಾನಕ ದೃಶ್ಯ ವೈರಲ್

ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್: ಭಯಾನಕ ದೃಶ್ಯ ವೈರಲ್

ಅಕ್ಷಯ್​ ಪಲ್ಲಮಜಲು​​
|

Updated on:Mar 17, 2026 | 1:13 PM

Share

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಹಂಬಲ ದೆಹಲಿಯ ಯುವಕ ಪವನ್‌ನ ಪ್ರಾಣಕ್ಕೆ ಕುತ್ತು ತಂದಿದೆ. ರಿವಾಲ್ವರ್ ಹಿಡಿದು ಅಪಾಯಕಾರಿ ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಪವನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದೀಗ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಬಗ್ಗೆ ಇಲ್ಲಿದೆ ನೋಡಿ ವರದಿ

ದೆಹಲಿ, ಮಾ.17: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬೇಕೆಂಬ ಹಂಬಲ ಮತ್ತು ಅಪಾಯಕಾರಿ ರೀಲ್ಸ್ ಮಾಡುವ ಹುಚ್ಚು ದೆಹಲಿಯ ಯುವಕನೊಬ್ಬನ ಪ್ರಾಣವನ್ನೇ ಬಲಿಪಡೆದಿದೆ. ಸಿನಿಮಾ ಶೈಲಿಯಲ್ಲಿ ರಿವಾಲ್ವರ್ ಹಿಡಿದು ರೀಲ್ಸ್ ಮಾಡುತ್ತಿದ್ದಾಗ ಅಚಾನಕ್ಕಾಗಿ ಗುಂಡು ಹಾರಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ದೆಹಲಿಯ ದಲ್ಲುಪುರ ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಪವನ್ ತನ್ನ ಗೆಳೆಯನ ಜೊತೆ ಸೇರಿ ರೀಲ್ಸ್ ಮಾಡಲು ಮುಂದಾಗಿದ್ದ. ತನ್ನ ಬಳಿ ಇದ್ದ ರಿವಾಲ್ವರ್‌ಗೆ ಬುಲೆಟ್ ಲೋಡ್ ಮಾಡುವುದು ಹೇಗೆ ಮತ್ತು ಅದನ್ನು ಭಯವಿಲ್ಲದೆ ನಿಭಾಯಿಸುವುದು ಹೇಗೆ ಎಂದು ವಿಡಿಯೋ ಮೂಲಕ ತೋರಿಸುತ್ತಿದ್ದ. ವಿಡಿಯೋ ಮಾಡುತ್ತಾ ಪವನ್ ನಗುಮುಖದಿಂದಲೇ ಲೋಡೆಡ್ ರಿವಾಲ್ವರ್ ಅನ್ನು ತನ್ನ ಎದೆಗೆ ಇಟ್ಟುಕೊಂಡಿದ್ದಾನೆ. ಈ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಗೆಳೆಯ “ಗುಂಡು ಹಾರಿಸಬೇಡ ಸಹೋದರ” ಎಂದು ಎಚ್ಚರಿಕೆ ನೀಡಿದ್ದಾನೆ. ಆದರೆ ಪವನ್ “ಅರೆ ಇಲ್ಲಪ್ಪ” ಎಂದು ಉತ್ತರಿಸುವಷ್ಟರಲ್ಲೇ ಟ್ರಿಗರ್ ಒತ್ತಲ್ಪಟ್ಟು ಗುಂಡು ಎದೆಯನ್ನು ಸೀಳಿ ಹೋಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 17, 2026 01:12 PM
Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More