ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಸಿಎಂ ಡಿಕೆ ಶಿವಕುಮಾರ್
ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹಾಗೂ ಕೇರಳ ಸಿಎಂ ವಿ.ಡಿ. ಸತೀಶನ್ ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆಶಿ, ಈ ವಿಚಾರದಲ್ಲಿ ಎನ್ಡಿಎ ರಾಜಕೀಯ ಮಾಡುತ್ತಿದೆ. ಅದಕ್ಕಾಗಿ ದಕ್ಷಿಣದ ಹಿತಾಸಕ್ತಿ ಕಾಪಾಡಿಕೊಳ್ಳಲು ಚರ್ಚೆ ಮಾಡುತ್ತೇವೆ. ನಮ್ಮ ಧ್ವನಿಯನ್ನ ಅವರು ಅಡಗಿಸೋದಕ್ಕೆ ಆಗಲ್ಲ ಎಂದವರು ತಿಳಿಸಿದ್ದಾರೆ.
ಬೆಂಗಳೂರು, ನವೆಂಬರ್ 28: ಕ್ಷೇತ್ರ ಪುನರ್ವಿಂಗಡಣೆಯಾದರೆ ಭಾರತದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ನಾಳೆ ಈ ಭಾಗದ ಕಾಂಗ್ರೆಸ್ ಸಿಎಂಗಳು ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕರ್ನಾಟಕ ಸಿಎಂ ಡಿಕೆ ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಕೇರಳ ಸಿಎಂ ವಿಡಿ ಸತೀಶನ್ ಉಪಸ್ಥಿತರಿರಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ನಮಗೆ ಅನ್ಯಾಯ ಆಗಬಾರದು. ಈ ವಿಚಾರದಲ್ಲಿ ಎನ್ಡಿಎ ರಾಜಕೀಯ ಮಾಡುತ್ತಿದೆ. ಅದಕ್ಕಾಗಿ ದಕ್ಷಿಣದ ಹಿತಾಸಕ್ತಿ ಕಾಪಾಡಿಕೊಳ್ಳಲು ಚರ್ಚೆ ಮಾಡುತ್ತೇವೆ. ನಮ್ಮ ಧ್ವನಿಯನ್ನ ಅವರು ಅಡಗಿಸೋದಕ್ಕೆ ಆಗಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 28, 2026 12:49 PM
Follow Us

