ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಸಿಎಂ ಡಿಕೆ ಶಿವಕುಮಾರ್​

ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಸಿಎಂ ಡಿಕೆ ಶಿವಕುಮಾರ್​

Edited By:

Updated on: Nov 28, 2026 | 12:50 PM

ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹಾಗೂ ಕೇರಳ ಸಿಎಂ ವಿ.ಡಿ. ಸತೀಶನ್ ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆಶಿ, ಈ ವಿಚಾರದಲ್ಲಿ ಎನ್​​ಡಿಎ ರಾಜಕೀಯ ಮಾಡುತ್ತಿದೆ. ಅದಕ್ಕಾಗಿ ದಕ್ಷಿಣದ ಹಿತಾಸಕ್ತಿ ಕಾಪಾಡಿಕೊಳ್ಳಲು ಚರ್ಚೆ ಮಾಡುತ್ತೇವೆ. ನಮ್ಮ ಧ್ವನಿಯನ್ನ ಅವರು ಅಡಗಿಸೋದಕ್ಕೆ ಆಗಲ್ಲ ಎಂದವರು ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್​​ 28: ಕ್ಷೇತ್ರ ಪುನರ್ವಿಂಗಡಣೆಯಾದರೆ ಭಾರತದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ನಾಳೆ ಈ ಭಾಗದ ಕಾಂಗ್ರೆಸ್​​ ಸಿಎಂಗಳು ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​, ತೆಲಂಗಾಣ ಮುಖ್ಯಮಂತ್ರಿ ರೇವಂತ್​​ ರೆಡ್ಡಿ ಮತ್ತು ಕೇರಳ ಸಿಎಂ ವಿಡಿ ಸತೀಶನ್ ಉಪಸ್ಥಿತರಿರಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್​​, ನಮಗೆ ಅನ್ಯಾಯ ಆಗಬಾರದು. ಈ ವಿಚಾರದಲ್ಲಿ ಎನ್​​ಡಿಎ ರಾಜಕೀಯ ಮಾಡುತ್ತಿದೆ. ಅದಕ್ಕಾಗಿ ದಕ್ಷಿಣದ ಹಿತಾಸಕ್ತಿ ಕಾಪಾಡಿಕೊಳ್ಳಲು ಚರ್ಚೆ ಮಾಡುತ್ತೇವೆ. ನಮ್ಮ ಧ್ವನಿಯನ್ನ ಅವರು ಅಡಗಿಸೋದಕ್ಕೆ ಆಗಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 28, 2026 12:49 PM
Loading...
Unable to load recommendations.
Follow Us
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More