ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್ಗೆ ಲೈಂಗಿಕ ಕಿರುಕುಳ: ಅಪಾರ್ಟ್ಮಂಟ್ನಲ್ಲಿ ನಡೆದಿದ್ದೇನು?
ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನ (Bengaluru) ಆರ್‌ಟಿ ನಗರದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಕುಮಾರ್ ಎಂದು ಗುರುತಿಸಲಾಗಿದೆ.
ಬೆಂಗಳೂರು, (ಅಕ್ಟೋಬರ್ 28): ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನ (Bengaluru) ಆರ್‌ಟಿ ನಗರದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಕುಮಾರ್ ಎಂದು ಗುರುತಿಸಲಾಗಿದೆ.
ಈ ಬಗ್ಗೆ ಉತ್ತರ ವಿಭಾಗ ಡಿಸಿಪಿ ನೇಮಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬ್ರೆಜಿಲ್ ಮಾಡೆಲ್ ಒಬ್ಬರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪುಡ್ ಡೆಲಿವರಿ ಮಾಡಲು ಹೋದ ವ್ಯಕ್ತಿ ಕಿರುಕುಳ ಕೊಟ್ಟಿದ್ದಾನೆ. ಈ ಬಗ್ಗೆ ಒಂದು ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಪೊಲೀಸ್ ಮೂಲಗಳ ಪ್ರಕಾರ ಇದೇ ಅಕ್ಟೋಬರ್ 17 ರಂದು ಖಾಸಗಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿರುವ ಬ್ರೆಜಿಲ್ ಮೂಲದ ಮಾಡೆಲ್ ಡೆಲಿವರಿ ಆ್ಯಪ್ ಮೂಲಕ ದಿನಸಿ ಆರ್ಡರ್ ಮಾಡಿದ್ದರು. ಈ ವೇಳೆ ದಿನಸಿ ತಂದ ಡೆಲಿವರಿ ಏಜೆಂಟ್, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಮಾಡೆಲ್ ಜೊತೆ ಅನುಚಿತ ವರ್ತನೆ ತೋರಿದ್ದಾನೆ. ಆಕೆಯನ್ನು ಮಾತಿಗೆಳೆದು ಆಕೆಯ ಮೈ ಮುಟ್ಟಲು ಯತ್ನಿಸಿದ್ದಾನೆ.ಇದರಿಂದ ಆತಂಕಕ್ಕೀಡಾದ ಬ್ರೆಜಿಲ್ ಮಾಡೆಲ್ ಕಿರುಚಿಕೊಂಡು ಬಾಗಿಲು ಲಾಕ್ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಡೆಲಿವರಿ ಏಜೆಂಟ್ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಮಾಡೆಲ್ ತನ್ನ ಉದ್ಯೋಗದಾತರಿಗೆ ಮಾಹಿತಿ ನೀಡಿದ್ದು, ಅವರ ಸಹಾಯದಿಂದ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಈ ದೂರಿನ ಮೇರೆಗೆ ಕುಮಾರ್ ಎನ್ನುವಾತನನ್ನು ಬಂಧಿಸಿದ್ದಾರೆ.

