ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್​​​​ಗೆ ಲೈಂಗಿಕ ಕಿರುಕುಳ: ಅಪಾರ್ಟ್ಮಂಟ್​​ನಲ್ಲಿ ನಡೆದಿದ್ದೇನು?

Updated on: Oct 28, 2025 | 3:24 PM

ಬ್ರೆಜಿಲ್ ಮಾಡೆ​ಲ್​ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನ (Bengaluru) ಆರ್‌ಟಿ ನಗರದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಕುಮಾರ್ ಎಂದು ಗುರುತಿಸಲಾಗಿದೆ.

ಬೆಂಗಳೂರು, (ಅಕ್ಟೋಬರ್​ 28): ಬ್ರೆಜಿಲ್ ಮಾಡೆ​ಲ್​ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನ (Bengaluru) ಆರ್‌ಟಿ ನಗರದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಕುಮಾರ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಉತ್ತರ ವಿಭಾಗ ಡಿಸಿಪಿ ನೇಮಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬ್ರೆಜಿಲ್ ಮಾಡೆಲ್ ಒಬ್ಬರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪುಡ್ ಡೆಲಿವರಿ ಮಾಡಲು ಹೋದ ವ್ಯಕ್ತಿ ಕಿರುಕುಳ ಕೊಟ್ಟಿದ್ದಾನೆ. ಈ ಬಗ್ಗೆ ಒಂದು ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಪೊಲೀಸ್ ಮೂಲಗಳ ಪ್ರಕಾರ ಇದೇ ಅಕ್ಟೋಬರ್ 17 ರಂದು ಖಾಸಗಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿರುವ ಬ್ರೆಜಿಲ್ ಮೂಲದ ಮಾಡೆಲ್ ಡೆಲಿವರಿ ಆ್ಯಪ್ ಮೂಲಕ ದಿನಸಿ ಆರ್ಡರ್ ಮಾಡಿದ್ದರು. ಈ ವೇಳೆ ದಿನಸಿ ತಂದ ಡೆಲಿವರಿ ಏಜೆಂಟ್, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಮಾಡೆಲ್ ಜೊತೆ ಅನುಚಿತ ವರ್ತನೆ ತೋರಿದ್ದಾನೆ. ಆಕೆಯನ್ನು ಮಾತಿಗೆಳೆದು ಆಕೆಯ ಮೈ ಮುಟ್ಟಲು ಯತ್ನಿಸಿದ್ದಾನೆ.ಇದರಿಂದ ಆತಂಕಕ್ಕೀಡಾದ ಬ್ರೆಜಿಲ್ ಮಾಡೆಲ್ ಕಿರುಚಿಕೊಂಡು ಬಾಗಿಲು ಲಾಕ್ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಡೆಲಿವರಿ ಏಜೆಂಟ್ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಮಾಡೆಲ್ ತನ್ನ ಉದ್ಯೋಗದಾತರಿಗೆ ಮಾಹಿತಿ ನೀಡಿದ್ದು, ಅವರ ಸಹಾಯದಿಂದ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಈ ದೂರಿನ ಮೇರೆಗೆ ಕುಮಾರ್ ಎನ್ನುವಾತನನ್ನು ಬಂಧಿಸಿದ್ದಾರೆ.

Published on: Oct 28, 2025 02:59 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More