ಹೆಚ್ಚುವರಿ ಡಿಸಿಎಂಗಳಿಗಾಗಿ ಆಗ್ರಹ ಎಐಸಿಸಿ ಅಧ್ಯಕ್ಷರಿಗೆ ಮಾಡುವ ಅವಮಾನವಾಗಿದೆ: ಡಿಕೆ ಸುರೇಶ್
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐವರು ಕಾರ್ಯಾಧ್ಯಕ್ಷರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಎಲ್ಲ 30 ಸಚಿವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಿದರೂ ತೊಂದರೆ ಇಲ್ಲ, ಅದರೆ ಹೆಚ್ಚುವರಿ ಡಿಸಿಎಂಗಳ ಬೇಡಿಕೆ ಮುಂದಿಡುತ್ತಾ ಎಐಸಿಸಿ ಅಧ್ಯಕ್ಷರಿಗೆ ಮಾಡುತ್ತಿರುವ ಅವಮಾನ ನಿಲ್ಲಬೇಕು ಎಂದು ಸುರೇಶ್ ಉಗ್ರಭಾವದಲ್ಲಿ ಹೇಳಿದರು.
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ತಮ್ಮ ಸಹೋದರ ಮತ್ತು ಸಂಸದ ಡಿಕೆ ಸುರೇಶ್ (DK Suresh) ಅವರ ಹೆಗಲ ಮೇಲೆ ಬಂದೂಕಿಟ್ಟು ಸ್ವಪಕ್ಷದ ಶತ್ರುಗಳ ಮೇಲೆ ಗುಂಡುಹಾರಿಸುವ ಪ್ರಯತ್ನದಲ್ಲಿದ್ದಾರೆಯೇ? ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸುರೇಶ್ ಅವರ ಮಾತುಗಳನ್ನು ಕೇಳಿಸಿಕೊಂಡರೆ ಹಾಗನ್ನಿಸದಿರದು. ಹೆಚ್ಚುವರಿ ಡಿಸಿಎಂಗಳು (additional DCMs) ಬೇಕೆಂದು ಕೆಲ ಸಚಿವರು ಮತ್ತು ಶಾಸಕರು ಬಹಳ ದಿನಗಳಿಂದ ಪಟ್ಟು ಹಿಡಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉದ್ರಿಕ್ತರಾದ ಸುರೇಶ್, ವಿಷಯದ ಬಗ್ಗೆ ಎಐಸಿಸಿ ಅಧ್ಯಕ್ಷರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅಧ್ಯಕ್ಷರು ನಮ್ಮ ರಾಜ್ಯದವರೇ ಆಗಿರುವ ಕಾರಣ ಅವರಿಗೆ ಇರುಸು ಮುರುಸು ಉಂಟು ಮಾಡುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಸುರೇಶ್ ಹೇಳಿದರು. ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐವರು ಕಾರ್ಯಾಧ್ಯಕ್ಷರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಎಲ್ಲ 30 ಸಚಿವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಿದರೂ ತೊಂದರೆ ಇಲ್ಲ, ಅದರೆ ಹೆಚ್ಚುವರಿ ಡಿಸಿಎಂಗಳ ಬೇಡಿಕೆ ಮುಂದಿಡುತ್ತಾ ಎಐಸಿಸಿ ಅಧ್ಯಕ್ಷರಿಗೆ ಮಾಡುತ್ತಿರುವ ಅವಮಾನ ನಿಲ್ಲಬೇಕು ಎಂದು ಸುರೇಶ್ ಉಗ್ರಭಾವದಲ್ಲಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ