ದೇವನಹಳ್ಳಿ ಸುತ್ತಮುತ್ತ ದಟ್ಟ ಮಂಜು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಬೆಳ್ಳಂಬೆಳಗ್ಗೆ ದೇವನಹಳ್ಳಿ ಸುತ್ತಮುತ್ತ ದಟ್ಟ ಮಂಜು ಆವರಿಸಿದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಹತ್ತಾರು ವಿಮಾನಗಳ ಟೇಕಾಫ್ ವಿಳಂಬವಾಗಿ, ಪ್ರಯಾಣಿಕರು ಪರದಾಡಿದರು. ದಟ್ಟ ಮಂಜಿನಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ ತಾತ್ಕಾಲಿಕವಾಗಿ ಅಸ್ತವ್ಯಸ್ತಗೊಂಡಿತು.
ಬೆಂಗಳೂರು, ಜನವರಿ 30: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಬೆಳ್ಳಂಬೆಳಗ್ಗೆ ದಟ್ಟ ಮಂಜು ಆವರಿಸಿದ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಯಿತು. ದಟ್ಟ ಮಂಜಿನಿಂದಾಗಿ ವಿಸಿಬಿಲಿಟಿ ಕಡಿಮೆ ಆದ ಕಾರಣ, ಹತ್ತಾರು ವಿಮಾನಗಳ ಟೇಕಾಫ್ ನಿಗದಿತ ಸಮಯಕ್ಕಿಂತ ವಿಳಂಬಗೊಂಡಿತು. ಈ ಅನಿರೀಕ್ಷಿತ ವಿಳಂಬದಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು.
