ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

Edited By:

Updated on: Jan 09, 2026 | 4:33 PM

ಆನೇಕಲ್‌ನ ಖಾಸಗಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಕಾಲೇಜು ಆಡಳಿತ ಮಂಡಳಿ ಹಾಗೂ ಉಪನ್ಯಾಸಕರಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಸದ್ಯ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಈ ಘಟನೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ವಿಡಿಯೋ ನೋಡಿ.

ಆನೇಕಲ್, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ನನ್ನ ಮಗಳು ನೇಣಿಗೆ ಶರಣಾಗಿದ್ದಾಳೆಂದು ತಾಯಿ ಆರೋಪಿಸಿದ್ದಾರೆ. ಟಾರ್ಚರ್ ನೀಡಿದ್ದ ಪ್ರಿನ್ಸಿಪಾಲ್ ಮತ್ತು ಅವಮಾನಿಸಿದ್ದ ಲೆಕ್ಚರರ್ ವಿರುದ್ಧ ಕೂಡಲೇ ಕ್ರಮಕೈಗೊಂಡು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಶವಾಗಾರದ ಮುಂದೆ ಯಶಸ್ವಿನಿ ಮೃತದೇಹವಿಟ್ಟು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jan 09, 2026 03:19 PM