Dy CM meets former CM: ಹಿರಿಯ ಮುತ್ಸದ್ದಿ ಎಸ್ ಎಂ ಕೃಷ್ಣ ಮನೆಗೆ ತೆರಳಿ ಗೌರವ ಸಲ್ಲಿಸಿದ ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: May 22, 2023 | 11:00 AM

ಕೃಷ್ಣ ಅವರಿಗೆ ಬೋಕೆ ನೀಡಿದ ಬಳಿಕ ಶಿವಕುಮಾರ್, ವಿಶ್ರಾಂತ ಜೀವನ ನಡೆಸುತ್ತಿರುವ ನಾಯಕನ ಪಾದಮುಟ್ಟಿ ಆಶೀರ್ವಾದ ಪಡೆದರು.

ಬೆಂಗಳೂರು: ಕಳೆದ ವಾರ ವಿಪರೀತ ದಣಿದಿದ್ದ ಮತ್ತು ಮಾಧ್ಯಮ ಪ್ರತಿನಿಧಿಗಳ ಮುಂದೆ ನಂಗೆ ನಿದ್ರೆ ಬೇಕಾಗಿದೆ, ದೇಹಕ್ಕೆ ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಿದ್ದ ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ರವಿವಾರವಾಗಿದ್ದ ನಿನ್ನೆ ಚೆನ್ನಾಗಿ ನಿದ್ರಿಸಿ ದಣಿವಾರಿಸಿಕೊಂಡಂತಿದೆ. ಇಂದು ಬೆಳಗ್ಗೆ ಅವರು ರಾಜ್ಯದ ಹಿರಿಯ ಮುತ್ಸದ್ದಿ (senior statesman), ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ (SM Krishna) ಅವರ ನಿವಾಸಕ್ಕೆ ತೆರಳಿ ಗೌರವಿಸಿದರು. ಕೃಷ್ಣ ಅವರಿಗೆ ಬೋಕೆ ನೀಡಿದ ಬಳಿಕ ಶಿವಕುಮಾರ್, ವಿಶ್ರಾಂತ ಜೀವನ ನಡೆಸುತ್ತಿರುವ ನಾಯಕನ ಪಾದಮುಟ್ಟಿ ಆಶೀರ್ವಾದ ಪಡೆದರು. ಅಮೇಲೆ ಅವರು ಶ್ರೀಮತಿ ಪ್ರೇಮ ಕೃಷ್ಣ ಅವರ ಪಾದಗಳಿಗೂ ನಮಸ್ಕರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.