ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ನಿನ್ನೆ ಸಾಯಂಕಾಲ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಇಂಡಿಯ ಒಕ್ಕೂಟದ ಇತರ ಪಕ್ಷಗಳ ನಾಯಕರ ಜೊತೆ ರಾಂಚಿಯಲ್ಲಿ ಹೇಮಂತ್ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ಭಾಗಿಯಾಗಿದ್ದರು.
ದೆಹಲಿ: ಕಳೆದ ಮೂರುದಿನಗಳಿಂದ ದೆಹಲಿಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿಯವರ ಭೇಟಿ ಯಾಕೆ ಎಂದು ಕೇಳಿದ ಪ್ರಶ್ನೆಗೆ ಅವರು ನೀರಾವರಿ ವಿಷಯ ಸೇರಿದಂತೆ ಹಲವು ವಿಷಯಗಳನ್ನು ಅವರೊಂದಿಗೆ ಚರ್ಚಿಸಬೇಕಿದೆ ಎಂದು ಹೇಳಿದರು. ಚರ್ಚಿಸಬೇಕಿರುವ ಬೇರೆ ವಿಷಯಗಳ ಬಗ್ಗೆ ಅವರು ಬೆಳಕು ಚೆಲ್ಲಲಿಲ್ಲ. ಕೇಂದ್ರ ಅರಣ್ಯ ಖಾತೆ ಸಚಿವ ಭೂಪೇಂದರ್ ಯಾದವ್ ಮತ್ತು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಶಿವಕುಮಾರ್ ಈಗಾಗಲೇ ಭೇಟಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದೆಹಲಿಗೆ ಆಗಮಿಸಿದ ಶಿವಕುಮಾರ್ ಸಂಪುಟ ಪುನಾರಚನೆ ಸಿಎಂ ವಿವೇಚನೆಗೆ ಬಿಟ್ಟ ವಿಷಯವೆಂದರು
Latest Videos