ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು? ಬಯಲಾಯ್ತು ಹೆಸರು

ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು? ಬಯಲಾಯ್ತು ಹೆಸರು
| Updated By: ಮದನ್​ ಕುಮಾರ್​

Updated on: Jul 05, 2024 | 4:12 PM

ದರ್ಶನ್​ಗೆ 40 ಲಕ್ಷ ರೂಪಾಯಿ ಹಣ ನೀಡಿದ ಮೋಹನ್​ ರಾಜುಗೆ ತನಿಖಾಧಿಕಾರಿಗಳು ಈಗಾಗಲೇ ಎರಡು ಬಾರಿ ನೋಟಿಸ್​ ನೀಡಿದ್ದಾರೆ. ತನಿಖೆಯಲ್ಲಿ ಹಾಜರಾಗುವಂತೆ ಸೂಚಿಸಿದ್ದಾರೆ. 40 ಲಕ್ಷ ರೂಪಾಯಿ ಹಣದ ಮೂಲ ಏನು? ದರ್ಶನ್​ ಆಪ್ತನಾದ ಪ್ರದೋಶ್​ಗೆ ಈ ಹಣವನ್ನು ಅವರು ನೀಡಿದ್ದು ಯಾಕೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಕುರಿತು ಹೆಚ್ಚಿನ ಮಾಹಿತಿ ಈ ವಿಡಿಯೋದಲ್ಲಿದೆ.

ನಟ ದರ್ಶನ್​ ಅವರಿಗೆ ಅನೇಕ ಪ್ರಭಾವಿ ವ್ಯಕ್ತಿಗಳ ಜೊತೆ ಒಡನಾಟ ಇದೆ. ಈಗ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದು, ಈ ಘಟನೆಯಿಂದಾಗಿ ಅವರ ಆಪ್ತರಿಗೂ ಸಂಕಷ್ಟ ಎದುರಾಗಿದೆ. ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿಕೊಂಡು, ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್​ ಮೇಲಿದೆ. ಕೊಲೆ ನಡೆದ ಬಳಿಕ ಈ ಪ್ರಕರಣವನ್ನು ಮುಚ್ಚಿ ಹಾಕಲು ದರ್ಶನ್​ ಅಂದಾಜು 80 ಲಕ್ಷ ರೂಪಾಯಿ ಹಣದ ಬಳಕೆ ಆಗಿತ್ತು. ಆ ಪೈಕಿ 40 ಲಕ್ಷ ರೂಪಾಯಿ ಹಣವನ್ನು ದರ್ಶನ್​ಗೆ ನೀಡಿದ್ದು ಯಾರು ಎಂಬುದು ಈಗ ಬಹಿರಂಗ ಆಗಿದೆ. ಬೆಂಗಳೂರಿನ ಉಪ ಮೇಯರ್​ ಆಗಿದ್ದ ಮೋಹನ್​ ರಾಜು ಅವರು ದರ್ಶನ್​ಗೆ 40 ಲಕ್ಷ ರೂಪಾಯಿ ನೀಡಿದ್ದಾರೆ. ಶಾಸಕ ಸತೀಶ್​ ರೆಡ್ಡಿಗೆ ಆಪ್ತರಾದ ಮೋಹನ್ ರಾಜು ಅವರಿಂದ ದರ್ಶನ್​ 40 ಲಕ್ಷ ರೂಪಾಯಿ ಹಣ ಪಡೆದಿದ್ದರು ಎಂಬುದು ತಿಳಿದುಬಂದಿದೆ. ದರ್ಶನ್ ಆಪ್ತ ಪ್ರದೋಶ್​ ಈ ಹಣವನ್ನು ಸಂಗ್ರಹಿಸಿಕೊಂಡಿದ್ದ ಎನ್ನಲಾಗಿದೆ. ತನಿಖೆಯಲ್ಲಿ ಈ ವಿಚಾರ ಬಹಿರಂಗ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ