ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ

Edited By:

Updated on: Sep 14, 2026 | 8:36 PM

ಬಾಗಲಕೋಟೆಯ ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ. ಅಂಕಿತಾ ಯರಗಲ್ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ವಜಾಗೊಳಿಸಲಾಗಿದೆ. ಪಿಜಿ ಅಧ್ಯಯನ ನಡೆಸುತ್ತಿರುವಾಗಲೇ ನಮ್ಮ ಕ್ಲಿನಿಕ್‌ನಲ್ಲಿ ಹಾಜರಾತಿ ಸಹಿ ಮಾಡುತ್ತಿದ್ದ ಪ್ರಕರಣ ಕುರಿತು ಡಿಹೆಚ್‌ಒ ಡಾ. ರಾಜಕುಮಾರ ಯರಗಲ್ ಅವರು ಆದೇಶ ಹೊರಡಿಸಿದ್ದಾರೆ.

ಬಾಗಲಕೋಟೆ, ಸೆಪ್ಟೆಂಬರ್​ 14: ಬಾಗಲಕೋಟೆಯ ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ. ಅಂಕಿತಾ ಯರಗಲ್​​ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ ಯರಗಲ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಮಗಳನ್ನೇ ತಂದೆ ವಜಾ ಮಾಡಿದ್ದಾರೆ. ಟಿವಿ9 ಡಿಜಿಟಲ್ ವರದಿ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಡಾ. ಅಂಕಿತಾ ಯರಗಲ್, ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ, 2023ರ ಮಾರ್ಚ್ 23ರಿಂದ ಬಾಗಲಕೋಟೆ ಎಸ್.ಎನ್. ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪೆಥಾಲಜಿ ಅಧ್ಯಯನ ಮಾಡುತ್ತಿದ್ದರು. ಈ ಅವಧಿಯಲ್ಲಿ ಎರಡೂ ಕಡೆ ಹಾಜರಾತಿ ಸಹಿ ಮಾಡಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಗೆ ಮಾಹಿತಿ ನೀಡದೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದು ಮತ್ತು ಅನಧಿಕೃತ ಗೈರು ಹಾಜರಿ ಕರ್ತವ್ಯ ಲೋಪಕ್ಕೆ ಕಾರಣವಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More