ಮಹಿಳೆ ದೂರು ನೀಡಿದರೂ ಶಾಸಕ ವಿನಯ್ ಕುಲಕರ್ಣಿ ಇನ್ನೂ ಯಾಕೆ ಅರೆಸ್ಟ್ ಆಗಿಲ್ಲ? ರವಿಕುಮಾರ್
ಸಿದ್ದರಾಮಯ್ಯ ಮೇಲೆ ಜನ ಇಟ್ಟಿದ್ದ ನಂಬಿಕೆ ಮತ್ತು ವಿಶ್ವಾಸ ಹುಸಿ ಹೋಗಿದೆ, ಕೇವಲ ತಮ್ಮ ಪಕ್ಷದ ಶಾಸಕರಿಗೆ ಅವರು ಅನುದಾನ ಬಿಡುಗಡೆ ಮಾಡುತ್ತಿದ್ದಾರೆ, ಮುಡಾ ಪ್ರಕರಣದಲ್ಲಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲೇಬೇಕು, ಅಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರಿಯುತ್ತದೆ ಎಂದು ರವಿಕುಮಾರ್ ಹೇಳಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್, ಸಿದ್ದರಾಮಯ್ಯ ಸರ್ಕಾರ ತನ್ನ ಶಾಸಕರಿಗೆ ಒಂದು ಬಗೆಯ ನೀತಿ ಬಿಜೆಪಿ ಶಾಸಕರಿಗೆ ಮತ್ತೊಂದು ಬಗೆಯ ನೀತಿ ಅನುಸರಿಸಿ ತಾರತಮ್ಯ ಧೋರಣೆ ಪ್ರದರ್ಶಿಸುತ್ತಿದೆ, ಮಹಿಳೆಯೊಬ್ಬರು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ದೂರು ನೀಡಿದ ಬಳಿಕ ಎಫ್ಐಅರ್ ದಾಖಲಾದರೂ ಅವರನ್ನು ಬಂಧಿಸಿಲ್ಲ ಆದರೆ ಮತ್ತೊಬ್ಬ ಮಹಿಳೆ ಅಂಥದ್ದೇ ದೂರನ್ನು ಬಿಜೆಪಿ ಶಾಸಕ ಮುನಿರತ್ನ ಪ್ರಶ್ನಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎನ್ನಲು ಕೋಳಿವಾಡ ಹೈಕಮಾಂಡ್ ಅಲ್ಲ: ಜಮೀರ್ ಆಹ್ಮದ್