ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ: ಸಿದ್ದರಾಮಯ್ಯ
ತೆರಿಗೆ ಹಣ ಹಂಚಿಕೆಯಲ್ಲಿ ರಾಜ್ಯ ಅನ್ಯಾಯವಾಗುತ್ತಿದ್ದರೂ ಜೆಡಿಎಸ್ ಮತ್ತು ಬಿಜೆಪಿ ಸಂಸದರು ಬಾಯಿ ಬಿಡಲ್ಲ, ಮಹಾದಾಯಿ, ಮೇಕೆದಾಟು ಯೋಜನೆ ಮತ್ತು ತುಂಗಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಕ್ಲೀಯರನ್ಸ್ ನೀಡದೆ ಆನುದಾನದಾನವನ್ನು ಹಿಡಿದಿಟ್ಟುಕೊಂಡರೂ ಸಂಸತ್ ಸದಸ್ಯರು ಮೌನವಾಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿಕೆ ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಲೋಕಾರ್ಪಣೆ ಮಾಡಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವು ಅನುದಾನ ಹಂಚಿಕೆಯಲ್ಲಿ ಕರ್ನಾಟಕದೆಡೆ ಮಲತಾಯಿ ಧೋರಣೆ ಪ್ರದರ್ಶಿಸುತ್ತಿದೆ ಎಂದು ಮತ್ತೊಮ್ಮೆ ಹೇಳಿದರು. ಅಭಿವೃದ್ಧಿ ವಿಷಯದಲ್ಲಿ ಕರ್ನಾಟಕಕ್ಕಿಂತ ಹಿಂದಿರುವ ಉತ್ತರ ಭಾರತದ ಹಲವಾರು ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚು ಹಣಕಾಸಿನ ನೆರವು ಸಿಗುತ್ತಿದೆ ಅದರೆ ದೇಶದಲ್ಲಿ ಅತಿಹೆಚ್ಚು ಜಿಎಸ್ಟಿ ಸಂದಾಯ ಮಾಡುವ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕ 4 ಲಕ್ಷ ಕೋಟಿ ರೂ. ಗಿಂತ ಹೆಚ್ಚು ತೆರಿಗೆ ಹಣ ಸಂದಾಯ ಮಾಡಿದರೂ ಕೇವಲ 60,000 ಕೋಟಿ ರೂ ಮಾತ್ರ ವಾಪಸ್ಸು ಪಡೆಯುತ್ತಿದೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸರ್ಕಾರದ ವೆಚ್ಚಗಳಲ್ಲಿ ಮಿತವ್ಯಯ ಸಾಧಿಸುವುದನ್ನು ಸಿಎಂ ಸಿದ್ದರಾಮಯ್ಯ ಕಡೆಗಣಿಸುತ್ತಿದ್ದಾರೆ!