ಚಂದ್ರಶೇಖರನಾಥ ಸ್ವಾಮೀಜಿ ಕ್ಷಮೆ ಯಾಚಿಸಿದರೂ ವಿಚಾರಣೆಗೆ ಕರೆದಿರುವುದು ಸರಿಯಲ್ಲ: ವಿಜಯೇಂದ್ರ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನೀಡಿದ ಹೇಳಿಕೆಯನ್ನು ಖಂಡಿಸಿದ್ದಾರೆ. ಜನಸಾಮಾನ್ಯರಿಗೆ ಅನ್ವಯಿಸುವ ಕಾನೂನು ಶ್ರೀಗಳಿಗೂ ಅನ್ವಯಿಸುತ್ತದೆ, ಮಠಾಧೀಶರು ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ತಲೆಹಾಕಬಾರದು, ಅವರು ಕ್ಷಮೆ ಕೇಳಿರೋದು ಸಂತಸದ ಸಂಗತಿ ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಸ್ವಾಮೀಜಿ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಅಶೀರ್ವಾದ ಪಡೆದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಇತ್ತೀಚಿಗೆ ನಗರದ ಫ್ರೀಡಂ ಪಾರ್ಕ್ನಲ್ಲಿ ವಕ್ಫ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸ್ವಾಮೀಜಿ ಅವರು ರಾಜ್ಯ ಸರ್ಕಾರದ ವಿರುದ್ಧ ಕೆಲ ಅಕ್ರೋಶದ ಮಾತುಗಳನ್ನಾಡಿದ್ದರು, ಅದೇ ಕಾರಣಕ್ಕೆ ಅವರ ವಿರುದ್ಧ ಎಫ್ಐಅರ್ ಒಂದನ್ನು ದಾಖಲಿಸಲಾಗಿದೆ, ತಾವಾಡಿದ ಮಾತಿಗೆ ಶ್ರೀಗಳು ಕ್ಷಮೆ ಯಾಚಿಸಿದ್ದರೂ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ ಎಂದು ವಿಜಯೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಿಜಯೇಂದ್ರನಂಥ ಬೇಜವಾಬ್ದಾರಿ ವ್ಯಕ್ತಿ ಬಿಜೆಪಿ ರಾಜ್ಯಾಧ್ಯಕ್ಷನಾಗಿರೋದು ಬೇಕಿಲ್ಲ: ರಮೇಶ್ ಜಾರಕಿಹೊಳಿ