ಮುಖ್ಯಮಂತ್ರಿ ಸ್ಪಷ್ಟನೆ ನೀಡಿದರೂ ರೈತರಿಗೆ ನೀಡಿದ ನೋಟೀಸ್ಗಳ ಬಗ್ಗೆ ಯಾಕೆ ಗೊಂದಲ? ಲಕ್ಷ್ಮಿ ಹೆಬ್ಬಾಳ್ಕರ್
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹರಿಹಾಯ್ದ ಲಕ್ಷ್ಮಿ ಹೆಬ್ಬಾಳ್ಕರ್, ಅವರಿಗೆ ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟರೆ ಬೇರೇನೂ ಗೊತ್ತಿಲ್ಲ ಆದರೆ ಕಾಂಗ್ರೆಸ್ ಮಹಾತ್ಮಾ ಗಾಂಧಿ, ಡಾ ಬಿಅರ್ ಅಂಬೇಡ್ಕರ್ ಅವರು ನೀಡಿದ ಸರ್ವಧರ್ಮ, ಸಮಬಾಳು, ಸಮಪಾಲು ತತ್ವವನ್ನು ಅನಸರಿಸಿಕೊಂಡು ಬಂದಿದೆ ಎಂದರು.
ಉಡುಪಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಮೀನುಗಳ ಅತಿಕ್ರಮಣವಾಗಿದ್ದರೆ ರೈತರಿಗೆ ಕಂದಾಯ ಇಲಾಖೆ ನೋಟೀಸ್ಗಳನ್ನು ನೀಡೋದು ನಿರಂತರವಾಗಿ ನಡೆದುಕೊಂಡು ಬಂದಿರುವ ಪ್ರಕ್ರಿಯೆ, ಆದರೆ ರೈತರಿಂದ ಒಂದು ಇಂಚು ಜಮೀನನ್ನೂ ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ, ಎಂಬಿ ಪಾಟೀಲ್ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ, ಈ ಬಗ್ಗೆ ಗೊಂದಲ ಸೃಷ್ಟಿಸುವುದು ಬೇಡ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ಲಿಂಗಾಯತ ವಿರೋಧಿ ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
