AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls Results; ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರಿಂದಲೇ ಕಳೆದ ಬಾರಿಗಿಂತ ಹೆಚ್ಚು ಮತ ಸಿಕ್ಕಿವೆ: ಪ್ರೀತಂಗೌಡ, ಹಾಸನದ ಪರಾಜಿತ ಬಿಜೆಪಿ ಅಭ್ಯರ್ಥಿ

Karnataka Assembly Polls Results; ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರಿಂದಲೇ ಕಳೆದ ಬಾರಿಗಿಂತ ಹೆಚ್ಚು ಮತ ಸಿಕ್ಕಿವೆ: ಪ್ರೀತಂಗೌಡ, ಹಾಸನದ ಪರಾಜಿತ ಬಿಜೆಪಿ ಅಭ್ಯರ್ಥಿ

ಅರುಣ್​ ಕುಮಾರ್​ ಬೆಳ್ಳಿ
|

Updated on: May 13, 2023 | 12:53 PM

Share

ಯಾವ ಆಯಾಮದಲ್ಲಿ ತಾನು ಹಿಂದೆ ಬಿದ್ದಿದ್ದೇನೆ ಅನ್ನೋದನ್ನು ಪರಾಮರ್ಶಿಸಿ ಮುಂದಿನ ಸಲ ಹೆಚ್ಚಿನ ತಯಾರಿಯೊಂದಿಗೆ ಸ್ಪರ್ಧಿಸುವುದಾಗಿ ಅವರು ಹೇಳಿದರು.

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ ಡಿ ದೇವೇಗೌಡರ (HD Devegowda) ಕುಟುಂಬಕ್ಕೆ ಸವಾಲೆಸೆದಿದ್ದ ಬಿಜೆಪಿ ಅಭ್ಯರ್ಥಿ ಮತ್ತು ಹಾಲಿ ಶಾಸಕ ಪ್ರೀತಂ ಗೌಡ (Preetham Gowda) ಸೋಲುಂಡಿದ್ದಾರೆ. ಅವರ ಸವಾಲನ್ನು ಹೆಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಗಣಿಸಿದ್ದರು. ಫಲಿತಾಂಶ ಪ್ರಕಟವಾದ ಬಳಿಕ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಪ್ರೀತಂ ಗೌಡ ತಾನು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು (development works) ಜನ ಮೆಚ್ಚಿದ್ದಾರೆ ಅದರ ಫಲವಾಗಿಯೇ ಕಳೆದ ಬಾರಿಗಿಂತ ಹೆಚ್ಚು ವೋಟು ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದರು. ಯಾವ ಆಯಾಮದಲ್ಲಿ ತಾನು ಹಿಂದೆ ಬಿದ್ದಿದ್ದೇನೆ ಅನ್ನೋದನ್ನು ಪರಾಮರ್ಶಿಸಿ ಮುಂದಿನ ಸಲ ಹೆಚ್ಚಿನ ತಯಾರಿಯೊಂದಿಗೆ ಸ್ಪರ್ಧಿಸುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More