ಗ್ಯಾರಂಟಿಗಳಿಗೆ ಭಾರಿ ಮೊತ್ತದ ಹಣ ತೆಗೆದಿರಿಸಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಆರ್ಥಿಕ ಶಿಸ್ತು ಕಾಯ್ದುಕೊಂಡಿದ್ದಾರೆ: ಎಂಬಿ ಪಾಟೀಲ್

ಎಲ್ಲರಿಗೂ ಸಿದ್ದರಾಮಯ್ಯ ತಮ್ಮ ಬಜೆಟ್ ಮೂಲಕ ಉತ್ತರ ನೀಡಿದ್ದಾರೆ ಎಂದು ಪಾಟೀಲ್ ಹೇಳಿದರು.

ಗ್ಯಾರಂಟಿಗಳಿಗೆ ಭಾರಿ ಮೊತ್ತದ ಹಣ ತೆಗೆದಿರಿಸಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಆರ್ಥಿಕ ಶಿಸ್ತು ಕಾಯ್ದುಕೊಂಡಿದ್ದಾರೆ: ಎಂಬಿ ಪಾಟೀಲ್
|

Updated on: Jul 08, 2023 | 3:13 PM

ವಿಜಯಪುರ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ ಎಂಬಿ ಪಾಟೀಲ್ (MB Patil), ಗ್ಯಾರಂಟಿ ಯೋಜನೆಗಳಿಗೆ ಭಾರೀ ಪ್ರಮಾಣದಲ್ಲಿ ಹಣ ಮೀಸಲಿಟ್ಟರೂ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಾವು ಮಂಡಿಸಿದ ರಾಜ್ಯ ಮುಂಗಡ ಪತ್ರದಲ್ಲಿ ಆರ್ಥಿಕ ಶಿಸ್ತನ್ನು (economic discipline) ಕಾಯ್ದುಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಲವಾರು ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಸಿರುವುದನ್ನು, ಮತ್ತು ಯೋಜನೆಗಳಿಗೆ ಮೀಸಲಾಗಿಟ್ಟಿದ್ದ ಮೊತ್ತಕ್ಕಿಂತ ಹೆಚ್ಚುವರಿ ಮೊತ್ತಕ್ಕೆ ಟೆಂಡರ್ ಗಳನ್ನು ಕರೆದು ದೊಡ್ಡ ಪ್ರಮಾಣದ ಅಕ್ರಮ ನಡೆಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಹೊತ್ತಿಗೆಯಲ್ಲೇ ಬಯಲಿಗೆ ಹಾಕಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ನಡೆದ ಅವ್ಯವಹಾರಗಳು ನಾಡಿನ ಜನರಿಗೆ ಗೊತ್ತು ಮಾಡಲು ಮುಖ್ಯಮಂತ್ರಿ ಹಾಗೆ ಮಾಡಿದ್ದಾರೆ ಎಂದು ಪಾಟೀಲ್ ಹೇಳಿದರು. ಕಾಂಗ್ರೆಸ್ ಪಕ್ಷ ಘೋಷಿಸಿದ ಯೋಜನೆ ಮತ್ತು ಗ್ಯಾರಂಟಿಗಳ ಬಗ್ಗೆ ವಿರೋಧ ಪಕ್ಷದವರು ಕುಹುಕವಾಡುತ್ತಿದ್ದರು ಮತ್ತು ಸಾಮಾನ್ಯ ಜನ ಕೂಡ ಆತಂಕ ವ್ಯಕ್ತಪಡಿಸುತ್ತಿದ್ದರು, ಸಿದ್ದರಾಮಯ್ಯ ಅವರೆಲ್ಲರಿಗೆ ತಮ್ಮ ಬಜೆಟ್ ಮೂಲಕ ಉತ್ತರ ನೀಡಿದ್ದಾರೆ ಎಂದು ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us