ಗಂಗಾವತಿಯ ಕಣವಿ ಆಂಜನೇಯ ದೇವಸ್ಥಾನದ ಬಳಿ ಕಾರು-ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ, ಪ್ರಾಣಾಪಾಯ ಇಲ್ಲ!
ಬೆಟ್ಟದ ಮೇಲೆ ಅಳವಡಿಸಲಾಗಿರುವ ಸಿಸಿಟಿವಿ ಕೆಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಕಾರಿನಲ್ಲಿದ್ದವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅವರಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕೊಪ್ಪಳ: ಜಿಲ್ಲೆಯ ಗಂಗಾವತಿ (Gangavati) ತಾಲ್ಲೂಕಿನ ಕಣವಿ ಆಂಜನೇಯ ದೇವಸ್ಥಾನದ (Kanavi Anjaneya Temple) ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಮತ್ತು ಟ್ರಾಕ್ಟರ್ ನಡುವೆ ನಡೆದ ಮುಖಾಮುಖಿ (head on) ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯವಾಗದಿರುವುದು ಆಶ್ಚರ್ಯದ ಸಂಗತಿಯೇ. ಬೆಟ್ಟದ ಮೇಲೆ ಅಳವಡಿಸಲಾಗಿರುವ ಸಿಸಿಟಿವಿ ಕೆಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಕಾರಿನಲ್ಲಿದ್ದವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅವರಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ