Karnataka Assembly Polls: ಬ್ಯೂಸಿ ಶೆಡ್ಯೂಲ್ ಹೊರತಾಗಿಯೂ ಪದ್ಮ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ಅರುಣ್​ ಕುಮಾರ್​ ಬೆಳ್ಳಿ

Updated on: May 03, 2023 | 6:50 PM

ಅಂಕೋಲಾದಲ್ಲಿ ಇಂದು ಪ್ರಧಾನಿ ಮೋದಿ ಪದ್ಮಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿರುವ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿಮಾಡಿ ಗೌರವ ಸಲ್ಲಿಸಿದರು,

ಉತ್ತರ ಕನ್ನಡ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕರ್ನಾಟಕದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಕೇವಲ ಮತಯಾಚನೆ ಮಾತ್ರ ಮಾಡುತ್ತಿಲ್ಲ. ಹಿರಿಯರನ್ನು, ಸಾಧಕರನ್ನು ಭೇಟಿಯಾಗಿ ಅವರಿಗೆ ಗೌರವ ಸಲ್ಲಿಸುವ, ಅವರ ಯೋಗಕ್ಷೇಮ ವಿಚಾರಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಅಂಕೋಲಾದಲ್ಲಿ ಇಂದು ಅವರು ಚುನಾವಣಾ ಪ್ರಚಾರದಲ್ಲಿ ತೊಡಗುವ ಮೊದಲು ಪರಿಸರಕ್ಕೆ ತಮ್ಮದೇ ಅದ ರೀತಿಯಲ್ಲಿ ಕೊಡುಗೆ ನೀಡಿ ವೃಕ್ಷಮಾತೆಯರೆನಿಸಿಕೊಂಡು ಪದ್ಮಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿರುವ ತುಳಸಿ ಗೌಡ (Tulsi Gowda) ಮತ್ತು ಸುಕ್ರಿ ಬೊಮ್ಮಗೌಡ (Sukri Bommagowda) ಅವರನ್ನು ಭೇಟಿಮಾಡಿ, ನಮಸ್ಕರಿಸಿ, ಹಿರಿಮಹಿಳೆಯರಿಂದ ಆಶೀರ್ವಾದ ಪಡೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 03, 2023 06:49 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.