ತನ್ನ ಸಹಿಯ ಫೋರ್ಜರಿಯಾಗಿದ್ದರೂ ಕುಮಾರಸ್ವಾಮಿ ಯಾಕೆ ದೂರು ದಾಖಲಿಸಿಲ್ಲ? ಡಿಕೆ ಶಿವಕುಮಾರ್
ತಮ್ಮ ಕಚೇರಿಯಲ್ಲಿ ಪೆಂಡಿಂಗ್ ಇರುವ ಪ್ರಕರಣಗಳಿಗೆ ರಾಜ್ಯಪಾಲರು ಶೀಘ್ರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕೆಂದು ಅಗ್ರಹಿಸಿ ಆಗಸ್ಟ್ 31ರಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಜಾಥಾ ನಡೆಸಲಾಗುವುದೆಂದು ಡಿಸಿಎಂ ಶಿವಕುಮಾರ್ ಹೇಳಿದರು.
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಡಿಕೆ ಶಿವಕುಮಾರ್ ಮತ್ತೊಮ್ಮೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಾನು ಸಹಿಯೇ ಮಾಡಿಲ್ಲ, ಹತ್ತು ವರ್ಷಗಳ ಹಿಂದೆಯೇ ಬೇಲ್ ತೆಗೆದುಕೊಂಡಿದ್ದೇನೆ ಎನ್ನುತ್ತಾರೆ, ಅವರು ಸಹಿ ಮಾಡಿಲ್ಲ ಅಂತಾದರೆ ಅದು ಫೋರ್ಜರಿಯಾಗಿರುತ್ತದೆ, ತನ್ನ ಸಹಿಯ ಫೋರ್ಜರಿಯಾದರೂ ಕುಮಾರಸ್ವಾಮಿ ಇನ್ನೂ ಯಾಕೆ ಒಂದೇ ಒಂದು ದೂರು ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಜೈಲಲ್ಲಿರುವ ದರ್ಶನ್ ಗೆ ಶಿವಕುಮಾರ್ ಸಹಾಯ ಮಾಡುವುದಾಗಿ ಹೇಳಿದ್ದರು, ಇದು ಸಹಾಯದ ಸ್ಯಾಂಪಲ್? ಅರ್ ಅಶೋಕ