ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾದರೂ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ, ಪೊಲೀಸ್ ಸರ್ಪಗಾವಲು

Edited By:

Updated on: Dec 06, 2022 | 11:04 AM

ಗಡಿ ಭಾಗದ 21 ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ ಪೊಲೀಸ ಕಾವಲು ನಿಯೋಜಿಸಲಾಗಿದೆ.

ಬೆಳಗಾವಿ (Belagavi) ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರು (In charge minister) ಬೆಳಗಾವಿಗೆ ಭೇಟಿ ನೀಡುವ ಕಾರ್ಯಕ್ರಮ ರದ್ದಾಗಿದ್ದರೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗಡಿ ಭಾಗದ 21 ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ ಪೊಲೀಸ ಕಾವಲು ನಿಯೋಜಿಸಲಾಗಿದೆ. ಒಬ್ಬ ಎಸಿಪಿ ಮೂವರು ಡಿವೈ ಎಸ್ ಪಿ, 30 ಪಿಎಸ್ ಐ, ಡಿಎಆರ್ (DAR) 5 ತುಕುಡಿಗಳನ್ನೊಳಗೊಂಡಂತೆ ಒಟ್ಟು 450 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ