ಸಂವಿಧಾನ ಬದಲಾಗಲ್ಲ ಅಂತ ಖುದ್ದು ಪ್ರಧಾನಿ ಮೋದಿ ಹೇಳಿದ್ದರೂ ಕಾಂಗ್ರೆಸ್ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದೆ: ಕೆ ಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Apr 15, 2024 | 1:56 PM

ಸಂವಿಧಾನದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಖುದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬಂದು ತಿದ್ದುಪಡಿ ಮಾಡಿ ಅಂತ ಹೇಳಿದರೂ ಬಿಜೆಪಿ ಮಾಡಲ್ಲ ಅಂತ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಕಾಂಗ್ರೆಸ್ ನಾಯಕರು ಈ ವಿಷಯದ ಬಗ್ಗೆ ಮಾತಾಡುವುದನ್ನು ನಿಲ್ಲಿಸಲಿ ಎಂದು ಈಶ್ವರಪ್ಪ ಹೇಳಿದರು.

ಶಿವಮೊಗ್ಗ: ಚುನಾವಣಾ ಪ್ರಚಾರದ ನಡುವೆ ಇಂದು ನಗರದಲ್ಲಿ ಸುದಿಗೋಷ್ಟಿ ನಡೆಸಿ ಮಾತಾಡಿದ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ (KS Eshwarappa), ಸಂವಿಧಾನ ಮತ್ತು ಆರೆಸ್ಸೆಸ್ ಬಗ್ಗೆ ಮಾತಾಡುವುದನ್ನು ನಿಲ್ಲಿಸಿ ತಾವು ಘೋಷಿಸಿಕೊಂಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ತಾಕೀತು ಮಾಡಿದರು. ಆರೆಸ್ಸೆಸ್ ಬಗ್ಗೆ ಮಾತಾಡದೆ ಹೋದರೆ ತಿಂದಿದ್ದು ಅವರಿಗೆ ಜೀರ್ಣವಾಗಲ್ಲ ಅನಿಸುತ್ತದೆ ಅಥವಾ ಆರೆಸ್ಸೆಸ್ ಸಂವಿಧಾನವನ್ನು ಬದಲಿಸಲು ಹೊರಟಿದೆ ಅಂತ ಸುಳ್ಳು ಹೇಳಿದರೆ ತಮಗೆ ವೋಟು ಸಿಗುತ್ತವೆ ಎಂಬ ಭ್ರಮೆಯಲ್ಲಿ ಅವರಿದ್ದರೆ, ಅದರಿಂದ ಹೊರಬರಲಿ ಎಂದು ಈಶ್ವರಪ್ಪ ಹೇಳಿದರು. ಸಂವಿಧಾನದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಖುದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬಂದು ತಿದ್ದುಪಡಿ ಮಾಡಿ ಅಂತ ಹೇಳಿದರೂ ಬಿಜೆಪಿ ಮಾಡಲ್ಲ ಅಂತ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಕಾಂಗ್ರೆಸ್ ನಾಯಕರು ಈ ವಿಷಯದ ಬಗ್ಗೆ ಮಾತಾಡುವುದನ್ನು ನಿಲ್ಲಿಸಲಿ ಎಂದು ಈಶ್ವರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚುನಾವಣೆಗೂ ಮುನ್ನ ಸೋಲೊಪ್ಪಿದರೇ ಸಿದ್ದರಾಮಯ್ಯ? ‘ಇಂಡಿಯಾ’ ಮೈತ್ರಿಕೂಟಕ್ಕೆ ಬಹುಮತ ಅನುಮಾನವೆಂದ ಸಿಎಂ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.