ಇವತ್ತು ವರಮಹಾಲಕ್ಷ್ಮಿ ಹಬ್ಬವಿದ್ದರೂ ಇಡೀ ದೇಶವೇ ನೋಡುವಂಥ ಪ್ರತಿಭಟನೆ ನಡೆಸಿದ್ದೇವೆ: ಡಿಕೆ ಶಿವಕುಮಾರ್

Updated on: Aug 08, 2025 | 7:36 PM

ನಾವು ಅಧಿಕಾರದಲ್ಲಿರುವುದರಿಂದ ಪ್ರತಿಭಟನಾ ರ‍್ಯಾಲಿ ನಡೆಸೋದು ಬೇಡ ಎಂಬ ತೀರ್ಮಾನ ತೆಗೆದುಕೊಳ್ಳಲಾಯಿತು, ಪೊಲೀಸರು ನಮ್ಮನ್ನೇ ವಶಕ್ಕೆ ಪಡೆಯೋದು ಸರಿಕಾಣಲ್ಲ, ಮುಖ್ಯ ಚುನಾವಣಾ ಅಧಿಕಾರಿ ಅನ್ಬು ಕುಮಾರ್ ಅವರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ, ಚುನಾವಣೆಯಲ್ಲಿ ಯಾವುದೇ ಪಕ್ಷ ಅಕ್ರಮ ನಡೆಸಿರಲಿ, ಯಾವುದೇ ಕ್ಷೇತ್ರದಲ್ಲಿ ಹೇರಾಫೇರಿ ಆಗಿರಲಿ, ಕ್ರಮ ತೆಗೆದುಕೊಳ್ಳುವಂತೆ ಅವರಿಗೆ ಹೇಳಿದ್ದೇವೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಆಗಸ್ಟ್ 8: ಮತಗಳ್ಳತನ ನಡೆದಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ (State Election Commission) ದೂರು ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇವತ್ತು ವರಮಹಾಲಕ್ಷ್ಮಿ ಹಬ್ಬವಿದ್ದರೂ ಇಡೀ ದೇಶವೇ ನೋಡುವಂಥ ಪ್ರತಿಭಟನೆ ಮಾಡಿದ್ದೇವೆ, ಮತ ಕಳ್ಳತನ ಅಗುತ್ತಿರುವುದನ್ನು ಜನಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದರು. ಅಕ್ರಮ ನಡೆದಿರುವುದನ್ನು ಕಾಂಗ್ರೆಸ್ ಪಕ್ಷದ ರೀಸರ್ಚ್​ ತಂಡ ವಿಸ್ತೃತವಾಗಿ ಪರಿಶೀಲನೆ ನಡೆಸಿದ ಬಳಿಕ ದಾಖಲೆಗಳ ಸೃಷ್ಟಿಯಾಗಿದೆ, ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕಷ್ಟು ಪುರಾವೆಗಳನ್ನು ಅಯೋಗಕ್ಕೆ ಸಲ್ಲಿಸಿದ್ದೇವೆ, ಆದರೆ ಸಮಗ್ರ ವಿವರಣೆಯನ್ನು ಸಲ್ಲಿಸಿಲ್ಲ, ನಮ್ಮ ರೀಸರ್ಚ್​ ಇನ್ನೂ ಮುಗಿದಿಲ್ಲ, ಇನ್ನೂ ಮಾಹಿತಿ ಸಂಗ್ರಹಿಸುವುದು ಬಾಕಿಯಿದೆ ಎಂದು ಶಿವಕುಮಾರ್ ಹೇಳಿದರು.

ಇದನ್ನೂ ಓದಿ:   ಹೆಬ್ಬಾಳದಲ್ಲಿ ಮೇಲ್ಸೇತುವೆ ಕಾಮಗಾರಿಯನ್ನು ವಿನೂತನ ಶೈಲಿಯಲ್ಲಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ