ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಿನ್ನಿಸುವ ವ್ಯವಸ್ಥಿತ ಜಾಲವೊಂದು ಪತ್ತೆ; ವಿಡಿಯೋ ನೋಡಿ
ಕೆಎಂಎಫ್ ಉತ್ಪನ್ನಗಳ ಬಗ್ಗೆಯೇ ಗ್ರಾಹಕರು ಅನುಮಾನಗೊಳ್ಳುವಂತಹ ಜಾಲವಾದ ಹಿನ್ನೆಲೆಯಲ್ಲಿ ಮೈಮುಲ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಇನ್ನು ಮೈಸೂರು ಜಿಲ್ಲೆಯಾದ್ಯಂತ ಈ ನಕಲಿ ತುಪ್ಪವನ್ನು ಸರಬರಾಜು ಮಾಡಲಾಗಿದೆ.
ಮೈಸೂರು: ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿದೆ. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದರು. ನಿನ್ನೆ (ಡಿಸೆಂಬರ್ 16) ಸ್ಥಳಕ್ಕೆ ಸಮಿತಿ ಸದಸ್ಯರು ಹೋಗಿ ಪರಿಶೀಲಿಸಿದಾಗ ನಕಲಿ ಜಾಲ ಪತ್ತೆಯಾಗಿದೆ. ಇಲ್ಲಿ ನಂದಿನ ತುಪ್ಪದ ಕವರ್ ತಯಾರಿಸುವ ಕೆಲಸ, ಅಸಲಿ ನಂದಿನಿ ತುಪ್ಪಕ್ಕೆ ಕಲಬೆರಕೆ ಮಾಡುವ ಕೆಲಸ ಹಾಗೂ ಟಿನ್‌ಗಳಿಗೆ ತುಂಬುವ ಕೆಲಸ ಮಾಡಲಾಗುತಿತ್ತು.
ತಲಾ 15 ಕೆಜಿ ತೂಕದ ಸುಮಾರು 1000 ಟಿನ್‌ಗಳು ದೊರಕಿವೆ. ರಾಶಿಗಟ್ಟಲೆ ವನಸ್ಪತಿ, ಪಾಮ್ ಆಯಿಲ್, ಕಲರಿಂಗ್ ಕೆಮಿಕಲ್, ನಂದಿನಿ ಬ್ರ್ಯಾಂಡ್ ತುಪ್ಪದ ನಕಲಿ ಕವರ್, ಪ್ಯಾಕಿಂಗ್ ಯೂನಿಟ್ ಎಲ್ಲವನ್ನೂ ಕಂಡು ಸಮಿತಿ ಸದಸ್ಯರೂ ಅವಕ್ಕಾಗಿದ್ದಾರೆ. ಕೂಡಲೇ ಪೊಲೀಸರು, ಕರ್ನಾಟಕ ಹಾಲು ಉತ್ಪನ್ನಗಳ ಸಹಕಾರ ಒಕ್ಕೂಟ, ಫುಡ್ ಸೇಫ್ಟಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.
ಕೆಎಂಎಫ್ ಉತ್ಪನ್ನಗಳ ಬಗ್ಗೆಯೇ ಗ್ರಾಹಕರು ಅನುಮಾನಗೊಳ್ಳುವಂತಹ ಜಾಲವಾದ ಹಿನ್ನೆಲೆಯಲ್ಲಿ ಮೈಮುಲ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಇನ್ನು ಮೈಸೂರು ಜಿಲ್ಲೆಯಾದ್ಯಂತ ಈ ನಕಲಿ ತುಪ್ಪವನ್ನು ಸರಬರಾಜು ಮಾಡಲಾಗಿದೆ. ತಮಿಳುನಾಡು ಮೂಲದ ಆರೋಪಿ ಈ ಜಾಲದ ಕಿಂಗ್‌ಪಿನ್ ಅನ್ನುವ ಮಾಹಿತಿ ಸಹಾ ಗೊತ್ತಾಗಿದೆ. ಸದ್ಯ ಆರೋಪಿಗಳು ಪರಾರಿಯಾಗಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಸ್ಥಳೀಯ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ತುಪ್ಪ ಆರೋಗ್ಯಕರ. ಆದರೆ ಡಾಲ್ಡಾ ದೇಹಕ್ಕೆ ಅಪಾಯಕಾರಿ. ಅದರಲ್ಲೂ ಯಾವ್ಯಾವುದೋ ಎಣ್ಣೆ, ರಾಸಾಯನಿಕ ಬಣ್ಣ ಬಳಸಿದ ನಕಲಿ ತುಪ್ಪ ದೇಹದಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಸಮಸ್ಯೆ ಉಂಟು ಮಾಡಬಹುದು. ಹೀಗಾಗಿಯೇ ಆಹಾರ ಸುರಕ್ಷತಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಸ್ಯಾಂಪಲ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ವರದಿ ಬಂದ ನಂತರ ಈ ನಕಲಿ ತುಪ್ಪ ಎಷ್ಟು ಅಪಾಯಕಾರಿ ಎನ್ನುವುದು ಗೊತ್ತಾಗಲಿದೆ. ಒಟ್ಟಾರೆ ಇದೆಲ್ಲಾ ಏನೇ ಇರಲಿ ಆರೋಗ್ಯದ ಜೊತೆ ಆಟವಾಡುವ ಇಂತವರಿಗೆ ತಕ್ಕ ಶಿಕ್ಷೆಯಾಗಬೇಕಿದೆ.
ಇದನ್ನೂ ಓದಿ:
ಬೆಂಗಳೂರಿನಿಂದ ದಕ್ಷಿಣ ಆಫ್ರಿಕಾಗೆ ಒಮಿಕ್ರಾನ್ ಸೋಂಕಿತ ಪರಾರಿ; ನಕಲಿ ಕೊವಿಡ್ ನೆಗೆಟಿವ್ ವರದಿ ನೀಡಿದ್ದ ನಾಲ್ವರ ಬಂಧನ
ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

ಡಿವೈಡರ್ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್

‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
