AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿಚಿಕ್ಕಮಗಳೂರಿನಲ್ಲಿ ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ಚಿಕ್ಕಮಗಳೂರಿನಲ್ಲಿ ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Apr 02, 2026 | 3:44 PM

Share

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪ್ರೌಢಶಾಲೆಯಲ್ಲಿ ಓರ್ವ SSLC ವಿದ್ಯಾರ್ಥಿಯು ತೀವ್ರ ಅನಾರೋಗ್ಯದ ನಡುವೆಯೂ ಪರೀಕ್ಷೆ ಬರೆದಿದ್ದಾರೆ. ಆರೋಗ್ಯದಲ್ಲಿ ಏರುಪೇರಾದರೂ, ಕೈಗೆ ಡ್ರಿಪ್ಸ್ ಹಾಕಿಸಿಕೊಂಡೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ತಮ್ಮ ವಿದ್ಯಾಭ್ಯಾಸದ ಮೇಲಿನ ಛಲವನ್ನು ಪ್ರದರ್ಶಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಯ ಧೈರ್ಯ ಮತ್ತು ದೃಢ ಸಂಕಲ್ಪಕ್ಕೆ ನಿದರ್ಶನವಾಗಿದೆ.

ಚಿಕ್ಕಮಗಳೂರು, ಏಪ್ರಿಲ್​​ 02: ಅನಾರೋಗ್ಯದ ಹಿನ್ನೆಲೆ ಡ್ರಿಪ್ಸ್ ಹಾಕಿಸಿಕೊಂಡೇ ವಿದ್ಯಾರ್ಥಿಯೋರ್ವ SSLC ಪರೀಕ್ಷೆ ಬರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ ಪ್ರೌಢ ಶಾಲೆಯಲ್ಲಿ ನಡೆದಿದೆ. ಬೆಳಗ್ಗೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿ ಗಗನ್​​ ಎಂಬಾತ ಅಸ್ವಸ್ಥಗೊಂಡಿದ್ದು, ತಕ್ಷಣವೇ ಅಂಬುಲೈನ್ಸ್ ಮೂಲಕ ಬಣಕಲ್ ಅಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅಗತ್ಯ ಚಿಕಿತ್ಸೆ ಪಡೆದ ಬಳಿಕ ವೈದ್ಯರ ಸಲಹೆ ಪಡೆದು ಡ್ರಿಪ್ಸ್ ಹಾಕಿಸಿಕೊಂಡೇ ಗಗನ್​​ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಬಳಿಕ ವಿದ್ಯಾರ್ಥಿಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More