AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!

ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!

ನವೀನ್ ಕುಮಾರ್ ಟಿ.
| Edited By: |

Updated on: Mar 31, 2026 | 2:45 PM

Share

ದೇವನಹಳ್ಳಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಮಾ.31ರಂದು ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಭಸ್ಮವಾಗಿದೆ. ವೇಗವಾಗಿ ಚಲಿಸುತ್ತಿದ್ದಾಗ ಇಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಮತ್ತು ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಕೆಳಗಿಳಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಿಂದಾಗಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

ದೇವನಹಳ್ಳಿ,ಮಾ.31: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ (ಮಾ.31) ನಡೆದಿದೆ. ಕಾರು ಹೆದ್ದಾರಿಯಲ್ಲಿ ವೇ ಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇನ್ನು ಇದನ್ನು ಗಮನಿಸಿದ ಕಾರು ಚಾಲಕ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More