AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ನವೀನ್ ಕುಮಾರ್ ಟಿ.
| Edited By: |

Updated on:Apr 02, 2026 | 10:52 PM

Share

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿಯಲ್ಲಿ 20 ಗುಂಟೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಕಿರುಕುಳ ಆರೋಪಿಸಿ ರೈತ ಆಂಜಿನಪ್ಪ ಸಚಿವ ಕೆ.ಹೆಚ್. ಮುನಿಯಪ್ಪ ಎದುರು ವಿಷ ಕುಡಿಯುವುದಾಗಿ ಬೆದರಿಸಿದ್ದಾರೆ. ಅಂಬೇಡ್ಕರ್ ಜಯಂತಿ ಸಭೆಯಲ್ಲಿ ವಿಷದ ಬಾಟಲ್ ತಂದಿದ್ದ ರೈತ, ವ್ಯಾಜ್ಯ ಬಗೆಹರಿಸದಿದ್ದರೆ ಕುಟುಂಬ ಸಮೇತ ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ ನೀಡಿದ್ದಾರೆ.

ದೇವನಹಳ್ಳಿ, ಏಪ್ರಿಲ್​ 02: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತಿನ ಜಟಾಪಟಿಯೇ ನಡೆಯಿತು. ಇದೇ ವೇಳೆ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತರೊಬ್ಬರು ಹೇಳಿದ್ದಾರೆ. ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ ಮಾಡಿದ್ದಾರೆ. ಅಂಬೇಡ್ಕರ್ ಜಯಂತಿ ಒಳಗಾಗಿ ವ್ಯಾಜ್ಯ ಬಗೆ ಹರಿಸದಿದ್ದರೆ ಕುಟುಂಬ ಸಮೇತ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪೊಲೀಸರು ವಿಷದ ಬಾಟಲ್ ಕಿತ್ತುಕೊಂಡು ಬುದ್ದಿವಾದ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 02, 2026 10:50 PM

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More