ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸಾವು!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಅತಿವೇಗದ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದರಿಂದ 45 ವರ್ಷದ ಬೈಕ್ ಸವಾರ ವೆಂಕಟೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಬೈಕ್‌ಗೆ ಗುದ್ದಿದೆ. ದೇವನಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
ದೇವನಹಳ್ಳಿ, ಮಾ.20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.ಬೆಟ್ಟಕೋಟೆ ನಿವಾಸಿ ವೆಂಕಟೇಗೌಡ (45) ಎಂಬುವವರು ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಬೆಟ್ಟಕೋಟೆ ಗ್ರಾಮದ ಬಳಿ ಅತಿವೇಗವಾಗಿ ಬಂದ ಕಾರು ಮೊದಲು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು, ಮುಂದೆ ಚಲಿಸುತ್ತಿದ್ದ ವೆಂಕಟೇಗೌಡ ಅವರ ಬೈಕ್‌ಗೆ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ವೆಂಕಟೇಗೌಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ಅಪಘಾತ ಎಸಗಿದ ಕಾರು ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಆನಂದ್ ಎಂಬುವವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
