ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸಾವು!

Edited By:

Updated on: Mar 20, 2026 | 11:09 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಅತಿವೇಗದ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದರಿಂದ 45 ವರ್ಷದ ಬೈಕ್ ಸವಾರ ವೆಂಕಟೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಬೈಕ್‌ಗೆ ಗುದ್ದಿದೆ. ದೇವನಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

ದೇವನಹಳ್ಳಿ, ಮಾ.20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.ಬೆಟ್ಟಕೋಟೆ ನಿವಾಸಿ ವೆಂಕಟೇಗೌಡ (45) ಎಂಬುವವರು ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಬೆಟ್ಟಕೋಟೆ ಗ್ರಾಮದ ಬಳಿ ಅತಿವೇಗವಾಗಿ ಬಂದ ಕಾರು ಮೊದಲು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು, ಮುಂದೆ ಚಲಿಸುತ್ತಿದ್ದ ವೆಂಕಟೇಗೌಡ ಅವರ ಬೈಕ್‌ಗೆ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ವೆಂಕಟೇಗೌಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ಅಪಘಾತ ಎಸಗಿದ ಕಾರು ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಆನಂದ್ ಎಂಬುವವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 20, 2026 11:03 AM
Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More