AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಬೇಧಿ!

ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ್ದ ಭಕ್ತರಿಗೆ ವಾಂತಿ, ಬೇಧಿ!

ನವೀನ್ ಕುಮಾರ್ ಟಿ.
| Edited By: |

Updated on:Mar 29, 2026 | 3:18 PM

Share

ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಶ್ರೀರಾಮನವಮಿ ಅಂಗವಾಗಿ ವಿತರಿಸಿದ ಅನ್ನಪ್ರಸಾದ ಸೇವಿಸಿದ ಭಕ್ತರಲ್ಲಿ ಫುಡ್ ಪಾಯಿಸನ್ ಆಗಿರುವುದು ಕಂಡುಬಂದಿದೆ. ನಿನ್ನೆ (ಮಾರ್ಚ್​ 28) ದೇವಸ್ಥಾನದಲ್ಲಿ ನೀಡಿದ ಪ್ರಸಾದ ಸೇವಿಸಿದ ಬಳಿಕ ಹಲವರಿಗೆ ವಾಂತಿ, ಬೇಧಿ ಸಮಸ್ಯೆ ಕಾಣಿಸಿಕೊಂಡು ಬಹುತೇಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರತಿವರ್ಷ ನಡೆಯುವಂತೆ ಈ ವರ್ಷವೂ ಅನ್ನಪ್ರಸಾದ ವಿತರಣೆ ಮಾಡಲಾಗಿತ್ತು. ಆದರೆ ಈ ಬಾರಿ ಪ್ರಸಾದ ಸೇವಿಸಿದ ಅನೇಕ ಭಕ್ತರು ಅಸ್ವಸ್ಥಗೊಂಡಿರುವುದು ಆತಂಕ ಮೂಡಿಸಿದೆ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಿಬ್ಬಂದಿ ಗ್ರಾಮದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ತೀವ್ರ ಅಸ್ವಸ್ಥರಾದವರನ್ನು ಆಂಬುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಲಾಗಿದೆ. ಉಳಿದವರಿಗೆ ಬೆಟ್ಟೇನಹಳ್ಳಿಯಲ್ಲೇ ವೈದ್ಯಕೀಯ ಸೇವೆ ಒದಗಿಸಲಾಗಿದೆ.

ದೇವನಹಳ್ಳಿ, ಮಾರ್ಚ್​ 29: ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಶ್ರೀರಾಮನವಮಿ ಅಂಗವಾಗಿ ವಿತರಿಸಿದ ಅನ್ನಪ್ರಸಾದ ಸೇವಿಸಿದ ಭಕ್ತರಲ್ಲಿ ಫುಡ್ ಪಾಯಿಸನ್ ಆಗಿರುವುದು ಕಂಡುಬಂದಿದೆ. ನಿನ್ನೆ (ಮಾರ್ಚ್​ 28) ದೇವಸ್ಥಾನದಲ್ಲಿ ನೀಡಿದ ಪ್ರಸಾದ ಸೇವಿಸಿದ ಬಳಿಕ ಹಲವರಿಗೆ ವಾಂತಿ, ಬೇಧಿ ಸಮಸ್ಯೆ ಕಾಣಿಸಿಕೊಂಡು ಬಹುತೇಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರತಿವರ್ಷ ನಡೆಯುವಂತೆ ಈ ವರ್ಷವೂ ಅನ್ನಪ್ರಸಾದ ವಿತರಣೆ ಮಾಡಲಾಗಿತ್ತು. ಆದರೆ ಈ ಬಾರಿ ಪ್ರಸಾದ ಸೇವಿಸಿದ ಅನೇಕ ಭಕ್ತರು ಅಸ್ವಸ್ಥಗೊಂಡಿರುವುದು ಆತಂಕ ಮೂಡಿಸಿದೆ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಿಬ್ಬಂದಿ ಗ್ರಾಮದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ತೀವ್ರ ಅಸ್ವಸ್ಥರಾದವರನ್ನು ಆಂಬುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಲಾಗಿದೆ. ಉಳಿದವರಿಗೆ ಬೆಟ್ಟೇನಹಳ್ಳಿಯಲ್ಲೇ ವೈದ್ಯಕೀಯ ಸೇವೆ ಒದಗಿಸಲಾಗಿದೆ.

 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Mar 29, 2026 03:15 PM

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More