ಆರ್​ಸಿಬಿ ಕಪ್ ಗೆಲ್ಲೋ ಭರವಸೆಯಲ್ಲಿ ಹೋಳಿಗೆ ವಿತರಣೆ!

Edited By:

Updated on: Jun 03, 2025 | 12:17 PM

18 ವರ್ಷಗಳ ಬಳಿಕ ಆರ್​ಸಿಬಿ ಐಪಿಎಲ್ ಕಪ್ ಗೆಲ್ಲುವ ಸಂಭ್ರಮದಲ್ಲಿ ಒಂದಡೆ ಅಭಿಮಾನಿಗಳು ಇದ್ದರೆ, ಮತ್ತೊಂದೆಡೆ ದೇವನಹಳ್ಳಿಯ ವೆಜ್ ಲ್ಯಾಂಡ್ ಹೋಟೆಲ್ ಮಾಲೀಕ ನಂಜುಂಡಿ ತಮ್ಮ ಗ್ರಾಹಕರಿಗೆ ಹೋಳಿಗೆ ಊಟ ಹಾಕಿಸಲು ಮುಂದಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ವೆಜ್ ಲ್ಯಾಂಡ್ ರೆಸ್ಟೋರೆಂಟ್​​ನಲ್ಲಿ ಇಂದು ಮಧ್ಯಾಹ್ನದಿಂದ ರಾತ್ರಿ ಪಂದ್ಯ ಮುಗಿಯುವ ವರೆಗೆ ಹೋಳಿಗೆ ವಿತರಣೆ ನಡೆಯಲಿದೆ.

ದೇವನಹಳ್ಳಿ, ಜೂನ್ 3: ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿರುವ ಆರ್​​ಸಿಬಿ ತಂಡ ಕಪ್ ಗೆಲ್ಲುವ ಭರವಸೆಯೊಂದಿಗೆ ದೇವನಹಳ್ಳಿಯ ವೆಜ್ ಲ್ಯಾಂಡ್ ಹೋಟೆಲ್ ಮಾಲೀಕ ನಂಜುಂಡಿ ಗ್ರಾಹಕರಿಗೆ ಹೋಳಿಗೆ ವಿತರಣೆ ಮಾಡುತ್ತಿದ್ದಾರೆ. ಆರ್​ಸಿಬಿ ಈ ಬಾರಿ ಕಪ್ ಗೆದ್ದೇ ಗೆಲ್ಲುತ್ತದೆ ಎಂದಿರುವ ಅವರು, ಇಂದು ಮಧ್ಯಾಹ್ನದಿಂದ ರಾತ್ರಿ ಮ್ಯಾಚ್ ಗೆಲ್ಲುವವರೆಗೂ ಗ್ರಾಹಕರಿಗೆ ಹೋಳಿಗೆ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More