ದೇವನಹಳ್ಳಿ: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾಯುಕ್ತ ಬಲೆಗೆ

ದೇವನಹಳ್ಳಿ: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾಯುಕ್ತ ಬಲೆಗೆ

TV9 Web
| Updated By: ಆಯೇಷಾ ಬಾನು

Updated on: May 08, 2024 | 9:48 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ನಿರಂಜನ್ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಪಂಚಾಯಿ ಕಚೇರಿ ಆವರಣದಲ್ಲಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಅವರನ್ನು ಅರೆಸ್ಟ್ ಮಾಡಲಾಗಿದೆ.

ದೇವನಹಳ್ಳಿ, ಮೇ.08: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ಅರೆಸ್ಟ್ ಆಗಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. ಅದ್ರಲ್ಲಿ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿ ಕಚೇರಿ ಆವರಣದಲ್ಲಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ