ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ: 8 ಖಾಸಗಿ ಸ್ಲೀಪರ್ ಕೋಚ್ ಬಸ್ಗಳ ಪಾರ್ಟಿಶನ್ ಡೋರ್ ತೆರವು
ಪದೇಪದೇ ಸ್ಲೀಪರ್ ಕೋಚ್ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ದೇವನಹಳ್ಳಿ ಆರ್ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಂಟು ಖಾಸಗಿ ಸ್ಲೀಪರ್ ಕೋಚ್ ಬಸ್ಗಳ ಪಾರ್ಟಿಶನ್ ಡೋರ್ಗಳನ್ನು ತೆರವುಗೊಳಿಸಲಾಗಿದೆ. ರಾಣಿ ಕ್ರಾಸ್ ಬಳಿ ಬಸ್ಗಳನ್ನು ನಿಲ್ಲಿಸಿ ಈ ಕಾರ್ಯ ನಡೆಸಲಾಗಿದ್ದು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ದೇವನಹಳ್ಳಿ, ಏಪ್ರಿಲ್ 21: ಪದೇಪದೆ ಸ್ಲೀಪರ್ ಕೋಚ್ ಬಸ್ಗಳ ಅಪಘಾತ ಹಿನ್ನೆಲೆ ಬೆಳ್ಳಂಬೆಳಗ್ಗೆ ದೇವನಹಳ್ಳಿ ಆರ್ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಖಾಸಗಿ ಸ್ಲೀಪರ್ ಕೋಚ್ ಬಸ್ಗಳ ಪಾರ್ಟಿಶನ್ ಡೋರ್ ತೆರವು ಮಾಡಿದ್ದಾರೆ. ದೇವನಹಳ್ಳಿ ಪಟ್ಟಣದ ರಾಣಿ ಕ್ರಾಸ್ ಬಳಿ ಬಸ್ಗಳನ್ನು ನಿಲ್ಲಿಸಿ ತೆರವು ಕಾರ್ಯ ನಡೆಸಲಾಗಿದೆ. ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ಗಳನ್ನು ನಡೆದಿರುವ ಅಧಿಕಾರಿಗಳು, ಬಸ್ ಡ್ರೈವರ್ ಮತ್ತು ಪ್ಯಾಸೆಂಜರ್ಗಳ ನಡುವಿನ ಡೋರ್ ತೆರವು ಮಾಡಿದ್ದಾರೆ.8 ಬಸ್ಗಳ ಡೋರ್ ಬಿಚ್ಚಿಸಿ ಸೀಜ್ ಮಾಡಲಾಗಿದೆ. ದೇವನಹಳ್ಳಿ ಆರ್ಟಿಒ ಸುಧೀರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Apr 21, 2026 12:38 PM
Follow Us
Latest Videos
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ

