ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ: 8 ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​​ ತೆರವು

Edited By:

Updated on: Apr 21, 2026 | 12:40 PM

ಪದೇಪದೇ ಸ್ಲೀಪರ್ ಕೋಚ್ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ದೇವನಹಳ್ಳಿ ಆರ್​ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಂಟು ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​ಗಳನ್ನು ತೆರವುಗೊಳಿಸಲಾಗಿದೆ. ರಾಣಿ ಕ್ರಾಸ್ ಬಳಿ ಬಸ್​ಗಳನ್ನು ನಿಲ್ಲಿಸಿ ಈ ಕಾರ್ಯ ನಡೆಸಲಾಗಿದ್ದು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ದೇವನಹಳ್ಳಿ, ಏಪ್ರಿಲ್​​ 21: ಪದೇಪದೆ ಸ್ಲೀಪರ್​ ಕೋಚ್​ ಬಸ್​ಗಳ ಅಪಘಾತ ಹಿನ್ನೆಲೆ ಬೆಳ್ಳಂಬೆಳಗ್ಗೆ ದೇವನಹಳ್ಳಿ ಆರ್​ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​​ ತೆರವು ಮಾಡಿದ್ದಾರೆ. ದೇವನಹಳ್ಳಿ ಪಟ್ಟಣದ ರಾಣಿ ಕ್ರಾಸ್​ ಬಳಿ ಬಸ್​ಗಳನ್ನು ನಿಲ್ಲಿಸಿ ತೆರವು ಕಾರ್ಯ ನಡೆಸಲಾಗಿದೆ. ಹೈದರಾಬಾದ್​​ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್​​ಗಳನ್ನು ನಡೆದಿರುವ ಅಧಿಕಾರಿಗಳು, ಬಸ್ ಡ್ರೈವರ್ ಮತ್ತು ಪ್ಯಾಸೆಂಜರ್​​ಗಳ ನಡುವಿನ ಡೋರ್ ತೆರವು ಮಾಡಿದ್ದಾರೆ.8 ಬಸ್​ಗಳ ಡೋರ್​ ಬಿಚ್ಚಿಸಿ ಸೀಜ್​​ ಮಾಡಲಾಗಿದೆ. ದೇವನಹಳ್ಳಿ ಆರ್​ಟಿಒ ಸುಧೀರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 21, 2026 12:38 PM
Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More