AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು!

ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು!

ದಿಲೀಪ್​, ಚೌಡಹಳ್ಳಿ
| Edited By: |

Updated on: Sep 12, 2026 | 12:20 PM

Share

ಮಂಡ್ಯದ ಅಶೋಕ ನಗರದಲ್ಲಿರುವ ಟೀ ಡೇ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಂಗಡಿಯಲ್ಲಿದ್ದ 21 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ತಿಮ್ಮೇಗೌಡರ ಒಡೆತನದ ಈ ಅಂಗಡಿಯ ಪಕ್ಕದ ಟೈಲ್ಸ್ ಅಂಗಡಿಗೂ ಬೆಂಕಿ ತಗುಲಿತ್ತು. ಘಟನೆಯಿಂದ ವ್ಯಾಪಾರಿಯ ಕನಸುಗಳು ಭಗ್ನಗೊಂಡಿವೆ.

ಮಂಡ್ಯ, ಸೆಪ್ಟೆಂಬರ್ 12: ಮಂಡ್ಯದ ಅಶೋಕ ನಗರದಲ್ಲಿರುವ ಟೀ ಡೇ ಎಂಬ ಟೀ ಅಂಗಡಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡು ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, ಸುಮಾರು 21 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಂಗಡಿಯ ಮಾಲೀಕ ತಿಮ್ಮೇಗೌಡರಿಗೆ ಸೇರಿದ ಈ ಟೀ ಡೇ ಶಾಪ್ ಎರಡುವರೆ ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿತ್ತು.

ಅಂಗಡಿಯಲ್ಲಿದ್ದ ಫ್ರೀಜರ್‌ಗಳು, ಫ್ರಿಡ್ಜ್, ಯುಪಿಎಸ್‌ ಸೇರಿದಂತೆ ಎಲ್ಲಾ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡವು ಅಂದಾಜು ಬೆಳಗ್ಗೆ 4:30ರ ಸುಮಾರಿಗೆ ಸಂಭವಿಸಿದ್ದು, ಅಕ್ಕಪಕ್ಕದ ಟೈಲ್ಸ್ ಅಂಗಡಿಗೂ ಸಹ ಬೆಂಕಿ ವ್ಯಾಪಿಸಿತ್ತು. ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾತನಾಡಿದ ಸತ್ಯಮೇವ, ತಮ್ಮ ಹೂಡಿಕೆ ಸಂಪೂರ್ಣ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಉದ್ಯಮದ ಮೇಲೆ ಕಟ್ಟಿಕೊಂಡಿದ್ದ ಬಹಳಷ್ಟು ಕನಸುಗಳು ಭಗ್ನವಾಗಿವೆ ಎಂದು ಅವರು ನೋವು ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ವ್ಯಾಪಾರಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More