Ranji Trophy 2026: ಪಂಜಾಬ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
Ranji Trophy 2026: ರಣರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದ ಕರ್ನಾಟಕ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ಗೆ ಲಗ್ಗೆ ಹಾಕಿದೆ. ನಾಯಕ ದೇವದತ್ ಪಡಿಕ್ಕಲ್ ಅವರ ಅಜೇಯ 120 ರನ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಅರ್ಧಶತಕದ ನೆರವಿನಿಂದ ಕರ್ನಾಟಕ 250 ರನ್‌ಗಳ ಗುರಿ ತಲುಪಿತು. ತಮ್ಮ ಚೊಚ್ಚಲ ನಾಯಕತ್ವದಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಪಡಿಕ್ಕಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು.
ರಣರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದ ಕರ್ನಾಟಕ ತಂಡ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಮೊಹಾಲಿಯ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ದಿನದಂದು ಗೆಲುವಿಗೆ 250 ರನ್‌ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ನಾಯಕ ದೇವದತ್ ಪಡಿಕ್ಕಲ್ ಅವರ ಅಜೇಯ ಶತಕ ಹಾಗೂ ಮಯಾಂಕ್ ಅಗರ್ವಾಲ್ ಅವರ ಅರ್ಧಶತಕದ ನೆರವಿನಿಂದ 5 ವಿಕೆಟ್ಗಳನ್ನು ಕಳೆದುಕೊಂಡು ಇನ್ನು 25 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ ಪಡಿಕ್ಕಲ್ ತಮ್ಮ ಚೊಚ್ಚಲ ನಾಯಕತ್ವದಲ್ಲೇ ತಂಡವನ್ನು ಗೆಲುವಿನತ್ತ ಮುನ್ನಡೆಸಿದಲ್ಲದೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.
ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಮಾಡಿ ಮೊದಲ ಇನ್ನಿಂಗ್ಸ್ನಲ್ಲಿ 309 ರನ್ ಕಲೆಹಾಕಿತು. ಿಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಆರಂಭಿಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಗೋಪಾಲ್ ಅವರ ಅರ್ಧಶತಕದ ನೆರವಿನಿಂದ 316 ರನ್ ಕಲೆಹಾಕಿ ಮೊದಲ ಇನ್ನಿಂಗ್ಸ್ನಲ್ಲಿ 7 ರನ್‌ಗಳ ಮುನ್ನಡೆ ಸಾಧಿಸಿತು.
ಎರಡನೇ ಇನ್ನಿಂಗ್ಸ್ ಆರಂಭಿಸಿದ ಪಂಜಾಬ್ ತಂಡ 256 ರನ್ಗಳಿಗೆ ಆಲೌಟ್ ಆಗುವ ಮೂಲಕ ಕರ್ನಾಟಕ ತಂಡಕ್ಕೆ 250 ರನ್‌ಗಳ ಗೆಲುವಿನ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ಪರ ನಾಯಕ ದೇವದತ್ ಪಡಿಕ್ಕಲ್ ಅಬ್ಬರದ ಇನ್ನಿಂಗ್ಸ್ ಆಡಿದರು. ಮಯಾಂಕ್ ಜೊತೆ ಶತಕದ ಜೊತೆಯಾಟ ನಡೆಸಿದ ದೇವದತ್ ಪಡಿಕ್ಕಲ್ ತಮ್ಮ ಶತಕವನ್ನು ಪೂರೈಸಿದರು. ಇತ್ತ ಮಯಾಂಕ್ ಅರ್ಧಶತಕ ಬಾರಿಸಿ ಔಟಾದರೆ, ಕೊನೆಯವರೆಗೂ ಅಜೇಯರಾಗಿ ಉಳಿದ ಪಡಿಕ್ಕಲ್ 85 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 120 ರನ್ ಬಾರಿಸಿದರು. ಕೊನೆಯಲ್ಲಿ ಶ್ರೇಯಸ್ ಗೋಪಾಲ್ ಕೂಡ 33 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

