RCB vs CSK: ಪಡಿಕ್ಕಲ್ ಪವರ್ಗೆ ಪತರುಗುಟ್ಟಿದ ಸಿಎಸ್ಕೆ; ವಿಡಿಯೋ
Devdutt Padikkal's Fiery Fifty vs CSK: ಚಿನ್ನಸ್ವಾಮಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಆರ್‌ಸಿಬಿ ಪರ ಅಬ್ಬರದ ಅರ್ಧಶತಕ ಬಾರಿಸಿದರು. ಕೇವಲ 29 ಎಸೆತಗಳಲ್ಲಿ 50 ರನ್ ಗಳಿಸಿ, ಪಾಟಿದರ್ ಜೊತೆ ಅರ್ಧಶತಕದ ಜೊತೆಯಾಟವಾಡಿ ತಂಡವನ್ನು 150 ರನ್ ದಾಟಿಸಿದರು. ಇದು ಈ ಆವೃತ್ತಿಯಲ್ಲಿ ಪಡಿಕ್ಕಲ್ ಅವರ ಎರಡನೇ ಅರ್ಧಶತಕವಾಗಿದ್ದು, ಅವರ ಉತ್ತಮ ಫಾರ್ಮ್ ಮುಂದುವರಿದಿದೆ.
ಚಿನ್ನಸ್ವಾಮಿಯಲ್ಲಿ ಇಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಆರ್‌ಸಿಬಿ ಪರ ಅಬ್ಬರದ ಇನ್ನಿಂಗ್ಸ್ ಆಡಿದರು. ಎಂದಿನಂತೆ ವಿರಾಟ್ ಕೊಹ್ಲಿ ವಿಕೆಟ್ ಪತನದ ಬಳಿಕ ಬಂದ ಪಡಿಕ್ಕಲ್ ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 50 ರನ್ ಬಾರಿಸಿ ಔಟಾದರು. ಹಾಗೆಯೇ ಪಾಟಿದರ್ ಜೊತೆಗೂಡಿ ಅರ್ಧಶತಕದ ಜೊತೆಯಾಟವನ್ನು ಕಟ್ಟಿ ತಂಡವನ್ನು 150 ರನ್ಗಳ ಗಡಿ ದಾಟಿಸಿದರು. ಇದು ಈ ಆವೃತ್ತಿಯಲ್ಲಿ ಪಡಿಕ್ಕಲ್ ಅವರ ಎರಡನೇ ಅರ್ಧಶತಕವಾಗಿದೆ. ಮೊದಲ ಪಂದ್ಯದಲ್ಲೂ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಡಿಕ್ಕಲ್ 61 ರನ್ಗಳ ಇನ್ನಿಂಗ್ಸ್ ಆಡಿದ್ದರು.
Published on: Apr 05, 2026 09:47 PM
Follow Us