5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ವಿಶೇಷ ಎಂದರೆ ಇದು ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅವರ 4ನೇ ಶತಕ. ಇದಕ್ಕೂ ಮುನ್ನ ಜಾರ್ಖಂಡ್ ವಿರುದ್ಧ 147 ರನ್ ಬಾರಿಸಿದ್ದರು. ಆ ಬಳಿಕ ಕೇರಳ ವಿರುದ್ಧ 124 ರನ್ ಗಳಿಸಿದ್ದರು. ಇನ್ನು ಪುದುಚೇರಿ ವಿರುದ್ಧ 113 ರನ್ಗಳ ಇನಿಂಗ್ಸ್ ಆಡಿದ್ದರು. ಇದೀಗ ತ್ರಿಪುರ ವಿರುದ್ಧ 120 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 108 ರನ್ ಬಾರಿಸಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ಪರ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ತ್ರಿಪುರ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಆರಂಭಿಕನಾಗಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಮೂಲಕ ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಹಾಫ್ ಸೆಂಚುರಿ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ದೇವದತ್ ಪಡಿಕ್ಕಲ್ 105 ಎಸೆತಗಳಲ್ಲಿ ಸೆಂಚುರಿ ಪೂರ್ಣಗೊಳಿಸಿದರು.
ವಿಶೇಷ ಎಂದರೆ ಇದು ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅವರ 4ನೇ ಶತಕ. ಇದಕ್ಕೂ ಮುನ್ನ ಜಾರ್ಖಂಡ್ ವಿರುದ್ಧ 147 ರನ್ ಬಾರಿಸಿದ್ದರು. ಆ ಬಳಿಕ ಕೇರಳ ವಿರುದ್ಧ 124 ರನ್ ಗಳಿಸಿದ್ದರು. ಇನ್ನು ಪುದುಚೇರಿ ವಿರುದ್ಧ 113 ರನ್ಗಳ ಇನಿಂಗ್ಸ್ ಆಡಿದ್ದರು. ಇದೀಗ ತ್ರಿಪುರ ವಿರುದ್ಧ 120 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 108 ರನ್ ಬಾರಿಸಿದ್ದಾರೆ.
ದೇವದತ್ ಪಡಿಕ್ಕಲ್ ಅವರ ಈ ಶತಕದ ನೆರವಿನೊಂದಿಗೆ ಕರ್ನಾಟಕ ತಂಡವು 45 ಓವರ್ಗಳ ಮುಕ್ತಾಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 269 ರನ್ ಕಲೆಹಾಕಿದೆ.