AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜೊತೆ ಮೈತ್ರಿಗೆ ಧಕ್ಕೆಯಾಗದ ಹಾಗೆ ವ್ಯವಹರಿಸುವಂತೆ ದೇವೇಗೌಡ ಹೇಳಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಬಿಜೆಪಿ ಜೊತೆ ಮೈತ್ರಿಗೆ ಧಕ್ಕೆಯಾಗದ ಹಾಗೆ ವ್ಯವಹರಿಸುವಂತೆ ದೇವೇಗೌಡ ಹೇಳಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 23, 2024 | 4:25 PM

Share

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಎನ್​ಡಿಎ ಅಭ್ಯರ್ಥಿ ಯಾರೆನ್ನುವುದು ಇನ್ನೂ ನಿರ್ಧಾರವಾಗಿಲ್ಲ, ಇಂದು ಸಾಯಂಕಾಲ 7 ಗಂಟೆಗೆ ಜೆಡಿಎಸ್ ಮುಖಂಡ ಕುಮಾರಸ್ವಾಮಿಯವರು ಬಿಜೆಪಿ ನಾಯಕರಾದ ಆರ್ ಅಶೋಕ ಮತ್ತು ಬಿವೈ ವಿಜಯೇಂದ್ರ ಜೊತೆ ಸಭೆ ನಡೆಸಿ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆಯೆಂದು ನಿಖಿಲ್ ಹೇಳಿದರು.

ಬೆಂಗಳೂರು: ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಎನ್​ಡಿಎ ಭಾಗವಾಗಿರುವ ಜೆಡಿಎಸ್ ಪಕ್ಷದ ಮುಖಂಡರು, ಬಿಜೆಪಿ ಜೊತೆ ಆಗಿರುವ ಮೈತ್ರಿಗೆ ಧಕ್ಕೆಯಾಗದಂತೆ ವ್ಯವಹರಿಸಬೇಕಾದ ಅಗತ್ಯವಿದೆ ಅಂತ ದೇವೇಗೌಡರು ಹೇಳಿರುವರೆಂದು ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯೋಗೇಶ್ವರ್ ವಿರುದ್ಧ ಸ್ಪರ್ಧಿಸುವುದು ಧೈರ್ಯದ ಪ್ರಶ್ನೆ ಅಲ್ಲವೆಂದ ನಿಖಿಲ್ ಕುಮಾರಸ್ವಾಮಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.