ಬಿಜೆಪಿ ಜೊತೆ ಮೈತ್ರಿಗೆ ಧಕ್ಕೆಯಾಗದ ಹಾಗೆ ವ್ಯವಹರಿಸುವಂತೆ ದೇವೇಗೌಡ ಹೇಳಿದ್ದಾರೆ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಎನ್ಡಿಎ ಅಭ್ಯರ್ಥಿ ಯಾರೆನ್ನುವುದು ಇನ್ನೂ ನಿರ್ಧಾರವಾಗಿಲ್ಲ, ಇಂದು ಸಾಯಂಕಾಲ 7 ಗಂಟೆಗೆ ಜೆಡಿಎಸ್ ಮುಖಂಡ ಕುಮಾರಸ್ವಾಮಿಯವರು ಬಿಜೆಪಿ ನಾಯಕರಾದ ಆರ್ ಅಶೋಕ ಮತ್ತು ಬಿವೈ ವಿಜಯೇಂದ್ರ ಜೊತೆ ಸಭೆ ನಡೆಸಿ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆಯೆಂದು ನಿಖಿಲ್ ಹೇಳಿದರು.
ಬೆಂಗಳೂರು: ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಎನ್ಡಿಎ ಭಾಗವಾಗಿರುವ ಜೆಡಿಎಸ್ ಪಕ್ಷದ ಮುಖಂಡರು, ಬಿಜೆಪಿ ಜೊತೆ ಆಗಿರುವ ಮೈತ್ರಿಗೆ ಧಕ್ಕೆಯಾಗದಂತೆ ವ್ಯವಹರಿಸಬೇಕಾದ ಅಗತ್ಯವಿದೆ ಅಂತ ದೇವೇಗೌಡರು ಹೇಳಿರುವರೆಂದು ತಿಳಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಯೋಗೇಶ್ವರ್ ವಿರುದ್ಧ ಸ್ಪರ್ಧಿಸುವುದು ಧೈರ್ಯದ ಪ್ರಶ್ನೆ ಅಲ್ಲವೆಂದ ನಿಖಿಲ್ ಕುಮಾರಸ್ವಾಮಿ