AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿ ವಯಸ್ಸಿನಲ್ಲೂ ಪ್ರಚಾರಕ್ಕೆ ಬರಲಿರುವ ದೇವೇಗೌಡ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ: ವಿಜಯೇಂದ್ರ

ಇಳಿ ವಯಸ್ಸಿನಲ್ಲೂ ಪ್ರಚಾರಕ್ಕೆ ಬರಲಿರುವ ದೇವೇಗೌಡ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Oct 29, 2024 | 11:24 AM

Share

ಒಳ ಮೀಸಲಾತಿ ಮತ್ತು ಕಾಂತ್​ರಾಜ್ ಅಯೋಗದ ವರದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾಮಾಣಿಕ ಮನೋಭಾವ ಹೊಂದಿದ್ದರೆ ಬಹಳ ಹಿಂದೆಯೇ ಅದನ್ನು ಅನುಷ್ಠಾನಗೊಳಿಸುತ್ತಿದ್ದರು, ಆದರೆ ಒಳ ಮೀಸಲಾತಿ ಅವರಿಗೆ ಒಂದು ರಾಜಕೀಯ ವಸ್ತುವಾಗಿದೆ, ಉಪ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರು: ರಾಜ್ಯ ಬಿಜೆಪಿ ಆಯೋಜಿಸಿದ್ದ ಐಕ್ಯತಾ ಓಟದಲ್ಲಿ ಭಾಗವಹಿಸಿದ್ದ ಬಿವೈ ವಿಜಯೇಂದ್ರ, ಇಳಿವಯಸ್ಸಿನಲ್ಲೂ ಹೆಚ್ ಡಿ ದೇವೇಗೌಡರು ಚನ್ನಪಟ್ಟಣದಲ್ಲಿ ನಿಖಿಲ್ ಪರ ಪ್ರಚಾರ ಮಾಡುವ ವಿಷಯ ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಮೂಡಿಸಿದೆ ಎಂದರು. ಅವರಲ್ಲಿರುವ ಉತ್ಸಾಹ ಮತ್ತು ಹುಮ್ಮಸ್ಸು ಎಲ್ಲರಿಗೂ ಪ್ರೇರಣೆಯಾಗಿದೆ , ನಿಖಿಲ್ ಎನ್​ಡಿಎ ಅಭ್ಯರ್ಥಿಯಾಗಿದ್ದು ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಮೇಲಿದೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಜೆಪಿಯ ಶಾಲು ಹೊದೆಸಿ ಸನ್ಮಾನಿಸುವಾಗ ಪರಸ್ಪರ ಜೋಕ್ ಕಟ್ ಮಾಡಿ ನಕ್ಕ ನಿಖಿಲ್-ವಿಜಯೇಂದ್ರ

Published on: Oct 29, 2024 11:20 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.