ಚಾಮುಂಡಿ ಬೆಟ್ಟದ ಅಭಿವೃದ್ಧಿ ಮತ್ತು ಭಕ್ತಾದಿಗಳ ಸವಲತ್ತಿಗೆ ಪ್ರಾಧಿಕಾರ ರಚಿಸಲಾಗಿದೆ: ಸಿದ್ದರಾಮಯ್ಯ

|

Updated on: Sep 03, 2024 | 4:46 PM

ಪ್ರಾಧಿಕಾರ ರಚನೆಗೆ ಹಿಂದಿನ ಒಡೆಯರ್ ಅರಸೊತ್ತಿಗೆಯ ಪ್ರತಿನಿಧಿಗಳು ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ ಮತ್ತು ಹೈಕೋರ್ಟ್ ನಿಂದ ತಡೆಯಾಜ್ಞೆಯನ್ನೂ ತರಲಾಗಿತ್ತು. ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ತೆರವುಗೊಳಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆ ನಡೆಸಿದರು.

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ಮುಗಿದ ನಂತರ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಧಿಕಾರ ರಛಿಸುವ ಉದ್ದೇಶವನ್ನು ವಿವರಿಸಿದರು. ಚಾಮುಂಡಿ ಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾ ನಡೆಯುತ್ತದೆ ಮತ್ತು ಬೇರೆ ಸಮಯಗಳಲ್ಲೂ ಇಲ್ಲಿಗೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಅಧಿಕವಾಗಿರುತ್ತದೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಟ್ಟು 24 ದೇವಸ್ಥಾನಗಳು ಬರುತ್ತವೆ ಎಂದ ಅವರು ಚಾಮುಂಡಿ ಬೆಟ್ಟದ ಅಭಿವೃದ್ದಿ ಮತ್ತು ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಸವಲತ್ತುಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತದೆ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸರ್ಕಾರ vs ರಾಜಮನೆತನ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ರಾಜಮಾತೆ ವಿರೋಧ