ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಚನ್ನಪಟ್ಟಣ ಅಭಿವೃದ್ಧಿ ಕೆಲಸಗಳು ಪೂರ್ಣಗೊಂಡಿವೆ: ಹೆಚ್ ಡಿ ಕುಮಾರಸ್ವಾಮಿ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚನ್ನಪಟ್ಟಣವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಬಗ್ಗೆ ಮಾತಾಡಿದ್ದಾರೆ ಅಂತ ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಚನ್ನಪಟ್ಟಣವನ್ನಾದರೂ ಸೇರಿಸಲಿ ಅಥವಾ ರಾಮನಗರವನ್ನಾದರೂ ಸೇರಿಸಲಿ, ಅವರೇನೇ ಮಾಡಿದರೂ ಚನ್ನಪಟ್ಟಣ ಚನ್ನಪಟ್ಟಣವೇ, ರಾಮನಗರ ರಾಮನಗರವೇ ಎಂದರು.
ಮಂಡ್ಯ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬೃಹತ್ ಕೈಗಾರಿಕೆಗಳ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಪದೇಪದೆ ಚನ್ನಪಟ್ಟಣಕ್ಕೆ ಹೋಗಿ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾತಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ರನ್ನು ಲೇವಡಿ ಮಾಡಿದರು. ಕಳೆದ ಹತ್ತು ದಿನಗಳಿಂದ ಚನ್ನಪಟ್ಟಣಕ್ಕೆ ಹೋಗಿ ಶಿವಕುಮಾರ್ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ, ಸತ್ಯಗಾಲ ಮತ್ತು ಕಣ್ವ ನೀರಾವರಿ ಯೋಜನೆಗಳ ಬಗ್ಗೆ ಅವರು ಮಾತಾಡಿದ್ದಾರೆ, ಅದು ತಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ಬಂದ ಯೋಜನೆ, ಚನ್ನಪಟ್ಟಣ ಕ್ಷೇತ್ರದಲ್ಲಿ ಶೇಕಡ 90ರಷ್ಟು ರಸ್ತೆ ಕಾಮಗಾರಿ ಪೂರ್ಣಗೊಂಡಿವೆ ಮತ್ತು ಶಾಲೆಗಳಿಗೂ ಕಾಯಕಲ್ಪ ನೀಡಲಾಗಿದೆ. ಚನ್ನಪಟ್ಟಣ ನಗರದ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಮನೆಗಳು ನೀಡದಿರುವ ಬಗ್ಗೆ ಮಾತಾಡುತ್ತಾರೆ, ಶಾಸಕನಾಗಿ ತಾನು ಮನೆಗಳನ್ನು ಕೊಡುವುದು ಸಾಧ್ಯವೇ? ಅದು ಸರ್ಕಾರದ ಕೆಲಸ ಎಂದು ಕುಮಾರಸ್ವಾಮಿ ಹೇಳಿದರು. ಹಿಂದೆ ಸಿದ್ದರಾಮಯ್ಯನವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ವಸತಿ ಯೋಜನೆಗಾಗಿ 28,000 ಕೋಟಿ ರೂ. ಬಿಡುಗಡೆ ಮಾಡಿದ್ದರು, ಆದರೆ ನಂತರ ಬಂದ ಸರ್ಕಾರಗಳು ಯೋಜನೆಯನ್ನು ಕಾರ್ಯಗತಗೊಳಿಸಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಪರಸ್ಪರ ಎದುರಾದ ಸಂದರ್ಭ ಹೇಗಿತ್ತು ಗೊತ್ತಾ?

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ

ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ

ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ

‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
