‘ಪುಷ್ಪ 3’ ಸಿನಿಮಾ ಕೆಲಸ ಈಗಲೇ ಶುರುವಾಗುತ್ತಾ? ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಉತ್ತರ ಕೇಳಿ..

Updated on: Mar 04, 2025 | 10:35 PM

‘ಪುಷ್ಪ 2’ ಸಿನಿಮಾದ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಅವರಿಗೆ ‘ಪುಷ್ಪ 3’ ಸಿನಿಮಾದ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ಸಿನಿಮಾದ ಕೆಲಸ ಯಾವಾಗ ಶುರುವಾಗಬಹುದು ಎಂದು ಕೇಳಿದ್ದಕ್ಕೆ ಅವರು ಈ ರೀತಿ ಉತ್ತರಿಸಿದ್ದಾರೆ. ಈ ವಿಡಿಯೋ ನೋಡಿ..

‘ಪುಷ್ಪ 2’ ಸಿನಿಮಾದ ಮ್ಯೂಸಿಕ್ ಡೈರೆಕ್ಟರ್ ದೇವಿಶ್ರೀ ಪ್ರಸಾದ್ (Devi Sri Prasad) ಅವರು ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ‘ನಾವೆಲ್ಲ ಪುಷ್ಪ 2 ಸಿನಿಮಾಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ನಿರ್ದೇಶಕ ಸುಕುಮಾರ್ ಮತ್ತು ಅಲ್ಲು ಅರ್ಜುನ್ ಅವರಿಗೆ ವಿಶ್ರಾಂತಿ ಬೇಕು. ಆ ಬಳಿಕ ಅವರು ಮರಳಿ ಬರುತ್ತಾರೆ’ ಎಂದು ದೇವಿಶ್ರೀ ಪ್ರಸಾದ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 04, 2025 10:34 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More