‘ಡೆವಿಲ್’ ಹೇಗಿದೆ? ಕಥೆಯ ದೊಡ್ಡ ಟ್ವಿಸ್ಟ್ ರಿವೀಲ್ ಮಾಡಿದ ಅಭಿಮಾನಿ
‘ಡೆವಿಲ್’ ಸಿನಿಮಾ ಹೇಗಿದೆ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಕಾಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಸಿನಿಮಾ ಹೇಗಿದೆ ಎಂಬ ವಿಮರ್ಶೆಯನ್ನು ಫ್ಯಾನ್ಸ್ ನೀಡಿದ್ದಾರೆ. ಕ್ಯಾಮೆರಾ ಎದುರು ಬಂದು ಸಿನಿಮಾದ ಬಗ್ಗೆ ವಿವರಿಸಿದ್ದಾರೆ. ಚಿತ್ರವನ್ನು ಹಾಡಿ ಹೊಗಳಿದ್ದಾರೆ. ಸಿನಿಮಾ ಎಲ್ಲರಿಗೂ ಇಷ್ಟ ಆಗುತ್ತದೆ ಎಂಬುದು ಅವರ ಅಭಿಪ್ರಾಯ.
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಅಭಿಮಾನಿಗಳು ಚಿತ್ರಮಂದಿರಕ್ಕೆ ನುಗ್ಗಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ಸಿನಿಮಾ ನೋಡಿದ ಬಳಿಕ ಅಭಿಮಾನಿಗಳು ಹೇಗಿದೆ ಎಂಬ ವಿಮರ್ಶೆ ತಿಳಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸೀಕ್ರೆಟ್ನ ಬಿಟ್ಟುಕೊಟ್ಟಿದ್ದಾರೆ. ಸಿನಿಮಾ ಟ್ರೇಲರ್ನಲ್ಲಿ ಆ ಬಗ್ಗೆ ಯಾವುದೇ ಮಾಹಿತಿಯನ್ನು ತಂಡದವರು ರಿವೀಲ್ ಮಾಡಿರಲಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

