ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರನ ದರ್ಶನಕ್ಕೆ ಜನವೋ ಜನ!

Edited By:

Updated on: May 17, 2026 | 1:14 PM

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಕ್ಕೆ ಶನಿ ಅಮಾವಾಸ್ಯೆ ಹಾಗೂ ವೀಕೆಂಡ್ ಹಿನ್ನೆಲೆ ಭಕ್ತಸಾಗರ ಹರಿದುಬಂದಿದೆ. ರಾಜ್ಯದೆಲ್ಲೆಡೆಯಿಂದ ಆಗಮಿಸಿದ ಭಕ್ತರು ಮಾದಪ್ಪನಿಗೆ ಚಿನ್ನದ ರಥ, ಬೆಳ್ಳಿ ರಥ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಸೇರಿ ಹಲವು ವಿಶೇಷ ಸೇವೆಗಳನ್ನು ಸಲ್ಲಿಸಿ ಪ್ರಾರ್ಥನೆಗಳನ್ನು ಅರ್ಪಿಸಿದ್ದಾರೆ.

ಚಾಮರಾಜನಗರ, ಮೇ 17: ಶನಿ ಅಮಾವಾಸ್ಯೆ ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂದಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಮಾದಪ್ಪನ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದ್ದಾರೆ. ನಿನ್ನೆಯಿಂದಲೂ ಮಾದಪ್ಪನ ಭಕ್ತ ಸಮೂಹವು ಬೆಟ್ಟದ ಕಡೆಗೆ ಬರುತ್ತಿದ್ದು, ದೇವಾಲಯದ ಆವರಣ ಭಕ್ತರಿಂದ ತುಂಬಿಹೋಗಿದೆ. ಭಕ್ತರು ತಮ್ಮ ಭಕ್ತಿ ಸಮರ್ಪಿಸಲು ಚಿನ್ನದ ರಥ, ಬೆಳ್ಳಿ ರಥ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಹಾಗೂ ಬಸವ ರಥ ಸೇರಿದಂತೆ ಹಲವು ವಿಭಿನ್ನ ಸೇವೆಗಳನ್ನು ಮಾದಪ್ಪನಿಗೆ ಅರ್ಪಿಸಿದ್ದಾರೆ. ಈ ವಿಶೇಷ ಸೇವೆಗಳ ಮೂಲಕ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More