ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ರಥೋತ್ಸವದ ವಿಡಿಯೋ ನೋಡಿ
ಕೊಪ್ಪಳದ ಗವಿಮಠದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ ನಡೆಯಿತು. ಪಂಡಿತ್ ವೆಂಕಟೇಶ್ ಕುಮಾರ್ ಉದ್ಘಾಟನೆ ನೆರವೇರಿಸಿದರು. ಸಿದ್ಧಗಂಗಾ ಸ್ವಾಮೀಜಿ, ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ನಾಗತಿಹಳ್ಳಿ ಚಂದ್ರಶೇಖರ್ ಮತ್ತು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಿದರು. ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಂಡು ಪುಣ್ಯ ಕ್ಷೇತ್ರವನ್ನು ಸ್ಮರಿಸಿದರು.
ಕೊಪ್ಪಳ, ಜನವರಿ 15: ಗವಿಮಠದ ಆವರಣದಲ್ಲಿ (gavisiddeshwar fair) ಜಾತ್ರಾ ಮಹೋತ್ಸವಕ್ಕೆ ಹಿಂದೂಸ್ಥಾನಿ ಗಾಯಕರಾಗಿರುವ ಪಂಡಿತ್ ವೆಂಕಟೇಶ ಕುಮಾರ್ ಚಾಲನೆ ನೀಡಿದ್ದಾರೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಠದ ಮುಂದಿನ ಮೈದಾನದಲ್ಲಿ ರಥೋತ್ಸವ ನಡೆದಿದ್ದು, ರಥಕ್ಕೆ ಉತ್ತತ್ತಿ ಎಸೆದು ಭಕ್ತರು ಭಕ್ತಿ ಸಮರ್ಪಿಸಿದರು. ವಿಜೃಂಭಣೆಯಿಂದ ನಡೆದ ಗವಿಮಠದ ಜಾತ್ರಾ ಮಹೋತ್ಸವದಲ್ಲಿ ಸಿದ್ಧಗಂಗಾ ಸ್ವಾಮೀಜಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಲಕ್ಷಾಂತರ ಭಕ್ತರು ಭಾಗಿಯಾಗಿದ್ದರು. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಐತಿಹಾಸಿಕ ಶ್ರೀ ಗವಿರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಮಾಡಲಾಗಿದೆ. ರಥ ಎಳೆದು ಭಕ್ತ ಸಾಗರ ಪುನೀತರಾದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.