ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಹಾಲರವಿ ಸೇವೆ, ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಭಕ್ತ ಸಮೂಹ
ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಜಾತ್ರೆ ಸಂಭ್ರಮ ಮನೆ ಮಾಡಿದೆ.
ಚಾಮರಾಜನಗರ, (ನವೆಂಬರ್ 13): ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಜಾತ್ರೆ ಸಂಭ್ರಮ ಮನೆ ಮಾಡಿದೆ. ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಹಾಲರವಿ ಸೇವೆ ಇರಲಿದ್ದು, ನಾಳೆ (ನವೆಂಬರ್ 14) ರಥೋತ್ಸವ ಜರುಗಲಿದೆ. ಈ ಹಿನ್ನೆಲೆಯಲ್ಲಿ ಮಾಯ್ಕಾರ ಮಾದಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದುಬರುತ್ತಿದೆ. ಭಕ್ತರು ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ಬೆಟ್ಟದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತ ಸಮೂಹ ನೆರೆದಿದೆ. ನಂಬಿದವರನ್ನು ಮಾದಪ್ಪ ಎಂದಿಗೂ ಕೈಬಿಡಲ್ಲವೆಂದು ನಂಬಿರುವ ಭಕ್ತರು, ಮಾದಪ್ಪನ ದರ್ಶನ ಪಡೆದು ವಿವಿಧ ಹರಕೆ ತೀರಿಸುತ್ತಿದ್ದಾರೆ.