ಹಾಸನಾಂಬೆ ದರ್ಶನೋತ್ಸವಕ್ಕೆ ಬೆಳ್ಳಂಬೆಳಿಗ್ಗೆಯೇ ಭಕ್ತಸಾಗರ: ಎಲ್ಲ ಸರತಿ ಸಾಲುಗಳೂ ಭರ್ತಿ

Edited By:

Updated on: Oct 31, 2026 | 7:43 AM

ಹಾಸನಾಂಬೆ ದರ್ಶನೋತ್ಸವದ ಎರಡನೇ ದಿನವಾದ ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಭಕ್ತಸಾಗರವೇ ಹರಿದುಬಂದಿದ್ದು, ದೇವಾಲಯದ ಎಲ್ಲಾ ಸರತಿ ಸಾಲುಗಳು ಭರ್ತಿಯಾಗಿವೆ. ನಿನ್ನೆ ಒಂದೇ ದಿನ 70 ಸಾವಿರಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ನೈವೇದ್ಯದ ಸಮಯ ಹೊರತುಪಡಿಸಿ ಉಳಿದ ಎಲ್ಲ ಸಮಯದಲ್ಲೂ ಭಕ್ತರಿಗೆ ದರ್ಶನಕ್ಕೆ ಅವಕಾಶವಿರಲಿದೆ.

ಹಾಸನ, ಅಕ್ಟೋಬರ್​​ 31: ಹಾಸನಾಂಬೆ ದರ್ಶನೋತ್ಸವಕ್ಕೆ ಎರಡೇ ದಿನವೂ ಭಕ್ತ ಸಾಗರವೇ ಹರಿದುಬಂದಿದೆ. ಬೆಳಿಗ್ಗೆ6 ಗಂಟೆಯಿಂದ ದರ್ಶನ ಆರಂಭವಾಗಿದ್ದು, ಎಲ್ಲ ಸರತಿ ಸಾಲುಗಳೂ ಭರ್ತಿಯಾಗಿವೆ. ಅಪಾರ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸುತ್ತಿದ್ದು, ನಿನ್ನೆ ಒಂದೇ ದಿನ 70 ಸಾವಿರಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ನೈವೇದ್ಯದ ಸಮಯ ಹೊರತುಪಡಿಸಿ ಉಳಿದ ಎಲ್ಲ ಸಮಯದಲ್ಲೂ ಭಕ್ತರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಬೆಳಿಗ್ಗೆ 8ರಿಂದ 10 ಗೋಲ್ಡ್ ಕಾರ್ಡ್, ಬೆಳಿಗ್ಗೆ10.30ರಿಂದ 12.30 ಗಣ್ಯರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More